ಅಥಣಿ : ವಕೀಲನ ಮನೆಯಲ್ಲಿ ಕಳ್ಳತನ ; ಚಿನ್ನಾಭರಣ ದೋಚಿ ಪರಾರಿ
ಅಥಣಿ : ತಡರಾತ್ರಿ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭದಲ್ಲಿ ಕಳ್ಳರು ಕೈಚಳಕ ತೋರಿಸಿದ್ದು ಅಪಾರ ಪ್ರಮಾಣದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ವಕೀಲ ಎನ್ ಎ ಕಾವರೆ ಮನೆಯಲ್ಲಿ ಕಳ್ಳತನ ನಡೆದಿದ್ದು, 430 ಗ್ರಾಮ ಚಿನ್ನ 160 ಗ್ರಾಮ ಬೆಳ್ಳಿ 50 ಸಾವಿರ ರೂಪಾಯಿ ದರೋಡೆ ಮಾಡಲಾಗಿದೆ.
ಸ್ಥಳಕ್ಕೆ ಅಥಣಿ ಹಾಗೂ ಐಗಳಿ ಗ್ರಾಮೀಣ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳ್ಳರ ಚಲನವಲನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಕುರಿತು ಐಗಿಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


