ಅಥಣಿ : ಬೈಕ್ ಕಳ್ಳರ ಅರೆಸ್ಟ್ ; ಸಿಕ್ಕಿದ್ದು ಎಷ್ಟು ಬೈಕ್ ಗೊತ್ತಾ..?
ಅಥಣಿ : ಬೈಕ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರ ಹೆಡೆಮುರಿ ಕಟ್ಟುವಲ್ಲಿ ಅಥಣಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಲಕ್ಷಾಂತರ ಮೌಲ್ಯದ ಬೈಕ್ ವಶಕ್ಕೆ ಪಡೆಯಲಾಗಿದೆ.
ಜತ್ತ ತಾಲೂಕಿನ ಅಮೂಲ ಪವಾರ್ ಹಾಗೂ ಅಥಣಿ ತಾಲೂಕಿನ ಮಧಬಾವಿ ಗ್ರಾಮದ ಲಖನ್ ಸುಂಗಾರೆ ಬಂಧಿತ ಆರೋಪಿಗಳು. ಇತ್ತೀಚಿಗೆ ಅಥಣಿ ಪಟ್ಟಣದ ಶಿವಾಜಿ ವೃತ್ತದಲ್ಲಿ ಸಂಶಯಾಸ್ಪದವಾಗಿ ತಿರುಗಾಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಆರೋಪಿ ಬೈಕ್ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.
ಬಂಧಿತ ಆರೋಪಿಗಳಿಂದ 4 ಲಕ್ಷ 75 ಸಾವಿರ ಮೌಲ್ಯದ 13 ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ. ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೀಮಾಶಂಕರ ಗುಳೆದ್ ಮಾಹಿತಿ ನೀಡಿದ್ದಾರೆ.
ಕಳ್ಳತನ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾದ ಅಥಣಿ ಪೊಲೀಸ್ ಸಿಬ್ಬಂದಿ ಕಾರ್ಯವೈಖರಿಯನ್ನು ಎಸ್ಪಿ ಶ್ಲಾಘಿಸಿದ್ದಾರೆ.