ಮೂವರು ಕಳ್ಳರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಡಚಿ ಗ್ರಾಮಸ್ಥರು ; ವೀಡಿಯೋ ವೈರಲ್
ಅಥಣಿ : ಗ್ರಾಮಗಳಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸುತ್ತಿದ್ದ ಮೂವರು ಕಳ್ಳರನ್ನು ಹೆಡೆಮುರಿ ಕಟ್ಟಿ ಪೊಲೀಸರಿಗೆ ಒಪ್ಪಿಸಿದ ಘಟನೆ ಅಥಣಿ ತಾಲೂಕಿನ ಬಡಚಿ ಗ್ರಾಮದಲ್ಲಿ ನಡೆದಿದೆ.
ಶನಿವಾರ ತಡರಾತ್ರಿ ಮಹಾರಾಷ್ಟ್ರ ಮೂಲದ ದರೋಡೆಕೋರರು ಬಡಚಿ ಗ್ರಾಮಕ್ಕೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ್ದರು. ಈ ಸಂದರ್ಭದಲ್ಲಿ ಜನರನ್ನು ನೋಡಿ ತಪ್ಪಿಸಿಕೊಳ್ಳಲು ಯತ್ನಿಸಿದಾಗ ಗ್ರಾಮಸ್ಥರು ಮೂವರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಕಂಟ್ರಿ ಪಿಸ್ತೂಲು ಮಾರಕಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.ಐಗಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

