ಅಥಣಿಯಲ್ಲಿ ಭೀಕರ ರಸ್ತೆ ಅಪಘಾತ ; ತಂದೆ, ಮಗಳು ಸಾವು
ಅಥಣಿ : ಬೈಕ್ ಗೆ ಹಿಂಬದಿಯಿಂದ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ತಂದೆ, ಮಗಳು ಸಾವಣಪ್ಪಿರುವ ಘಟನೆ ಅಥಣಿ ತಾಲೂಕಿನ ಅನಂತಪುರ ಗ್ರಾಮದಲ್ಲಿ ನಡೆದಿದೆ.
ರಾಮು ಕರ್ಣಿ ( 28 ) ಜಾಹ್ನವಿ ಕರ್ಣಿ (11) ಮೃತ ದುರ್ದೈವಿಗಳು. ಮಹಾರಾಷ್ಟ್ರದ ಜತ್ ತಾಲೂಕಿನ ನಿವಾಸಿಗಳು ಅನಂತಪುರ ಗ್ರಾಮದಲ್ಲಿ ಮದುಗೆ ಸಮಾರಂಭಕ್ಕೆ ಬಂದಾಗ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರು ಚಾಲಕ ಪರಾರಿಯಾಗಿದ್ದಾನೆ. ಕಾಗವಾಡ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


