ಅಥಣಿ : ಹೆಸ್ಕಾಂ ಕಚೇರಿ ಆವರಣದಲ್ಲಿ ನೇಣಿಗೆ ಶರಣಾದ ನೌಕರ
ಅಥಣಿ : ವಿದ್ಯುತ್ ವಿತರಣಾ ಕೇಂದ್ರ ಆವರಣದಲ್ಲಿ ಹೆಸ್ಕಾಂ ನೌಕರರ ನೇಣಿಗೆ ಶರಣಾದ ಘಟನೆ ಸೋಮವಾರ ಬೆಳಗಿನ ಜಾವ ಬೆಳಕಿಗೆ ಬಂದಿದೆ.
ಬೆಳಗಾವಿ ಜಿಲ್ಲೆ ಅಥಣಿ ಪಟ್ಟಣದ ಹಲ್ಯಾಳ ಸರ್ಕಲ್ ಹೊಂದಿಕೊಂಡಿರುವ ವಿದ್ಯುತ್ ವಿತರಣಾ ಕೇಂದ್ರದ ಆವರಣದಲ್ಲಿ ಮಂಜುನಾಥ ಮುತ್ತಗಿ (35) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುತ್ತಿಗೆ ಆಧಾರದ ಮೇಲೆ ಅಥಣಿ ವಿದ್ಯುತ್ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು.
ವಿದ್ಯುತ್ ಕಂಬಗಳನ್ನು ನೆಡುವ ಟ್ರ್ಯಾಕ್ಟರಗೆ ಬೈಕ್ ಸಹಾಯದಿಂದಾಗಿ ನೇಣು ಬಿಗಿದು ಕೊಂಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ದೊರೆತಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಅಥಣಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.