
ಅಥಣಿ ಪೊಲೀಸರ ಭರ್ಜರಿ ಕಾರ್ಯಾಚರಣೆ ; ಜನರ ಕೈಸೇರಿದ ಜಂಗಮವಾಣಿ

ಅಥಣಿ : ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋಗಿದ್ದ 40 ಮೊಬೈಲ್ ಗಳನ್ನು ಪತ್ತೆ ಹಚ್ಚಿ ವಾರಸುದಾರಿಗೆ ಹಸ್ತಾಂತರಿಸಲಾಗಿದೆ.
CEIR ಪೊರ್ಟಲ್ ಮೂಲಕ ಕಳುವಾಗಿದ್ದ ಮೋಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿರುವ ಪೊಲೀಸರು ವಾರಸುದಾರಿಗೆ ಹಸ್ತಾಂತರಿಸಿದ್ದಾರೆ.
ಈ ಸಂದರ್ಭದಲ್ಲಿ ಅಥಣಿ ವಲಯದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿಎಸ್ಐ ಗಿರಿಮಲ್ಲಪ್ಪ ಉಪ್ಪಾರ್ ಸೇರಿದಂತೆ ಠಾಣೆ ಸಿಬ್ಬಂದಿ ಉಪಸ್ಥಿತರಿದ್ದರು.