Select Page

Advertisement

ಇದೇ 20ರಂದು ಸಿಎಂ ನಿವಾಸಕ್ಕೆ ಮುತ್ತಿಗೆ : ರಮೇಶ್ ಗೌಡ ಪಾಟೀಲ್

ಇದೇ 20ರಂದು ಸಿಎಂ ನಿವಾಸಕ್ಕೆ ಮುತ್ತಿಗೆ : ರಮೇಶ್ ಗೌಡ ಪಾಟೀಲ್

ಚಿಕ್ಕೋಡಿ : ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವಂತೆ ಹಲವು ದಶಕಗಳ ಹೋರಾಟ ಇದಾಗಿದೆ, ಆದರೆ ಸರ್ಕಾರಗಳು ಭರವಸೆ ನೀಡುತ್ತಾ ಬಂದಿದೆ, ಇದನ್ನು ಖಂಡಿಸಿ ನಾವು ಬರುವ ದಿನಾಂಕ ಇಪ್ಪತ್ತರಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಅಥಣಿ ತಾಲೂಕು ಪಂಚಮಸಾಲಿ ಸಂಘಟನೆಯ ಅಧ್ಯಕ್ಷರಾದ ರಮೇಶ್ ಗೌಡ ಪಾಟೀಲ್ ಅವರು ಹೇಳಿದರು.

ಅವರು ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತಾ, ಪಂಚಮಸಾಲಿ ಸಮಾಜ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿದೆ, ಈ ಸಮಾಜದಲ್ಲಿ ಶೈಕ್ಷಣಿಕವಾಗಿ ಮುಂಬರುವ ದೃಷ್ಟಿಕೋನದಿಂದ ಸರ್ಕಾರಕ್ಕೆ 2ಎ ಮೀಸಲಾತಿಯನ್ನು ದಶಕಗಳಿಂದ ಕೇಳುತ್ತಿದ್ದೇವೆ. ಆದರೆ ಹಲವು ಮುಖ್ಯಮಂತ್ರಿಗಳು ಭರವಸೆಯನ್ನು ಮಾತ್ರ ನೀಡುತ್ತಿದ್ದಾರೆ. ಇದನ್ನು ನಾವು ಖಂಡಿಸಿ ಹಾವೇರಿ ಜಿಲ್ಲೆಯ ಶಿಗ್ಗಾವಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ನಿವಾಸವನ್ನು ಮುತ್ತಿಗೆ ಹಾಕುತ್ತೇವೆ, ಅಥಣಿ ತಾಲೂಕಿನಿಂದ ಐದು ಸಾವಿರಕ್ಕೂ ಹೆಚ್ಚು ಜನ ತೆರಳುತ್ತಿದ್ದೇವೆ ಹಾಗೂ ಸಮಾಜ ಬಾಂಧವರು ಶಿಗ್ಗಾವಿಗೆ ಬರುವಂತೆ ಕರೆ ನೀಡಿದರು.

ಒಂದು ವೇಳೆ ೨ಎ ಮೀಸಲಾತಿ ಇದೇ ರೀತಿ ವಿಳಂಬ ಧೋರಣೆ ಮುಂದುವರೆಸಿದರೆ. ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ 25 ಲಕ್ಷಕ್ಕೂ ಹೆಚ್ಚು ಸಮಾಜ ಬಾಂಧವರದಿಂದ ಬೃಹತ್ ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು. ಸರ್ಕಾರ ಕೂಡಲೇ ಎಚ್ಚೆತ್ತುಕೊಂಡು ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿದರು.

Advertisement

Leave a reply

Your email address will not be published. Required fields are marked *

error: Content is protected !!