ಅಥಣಿಯಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಸಾವು
ಅಥಣಿ : ಅಥಣಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮೂವರು ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ.
ಕೆಎಸ್ಆರ್ಟಿಸಿ ಬಸ್ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಅಥಣಿ ಪಟ್ಟಣದ ಹೊರವಲಯದಲ್ಲಿ ಘಟನೆ ಸಂಭವಿಸಿದೆ. ಮೃತರು ಕಲಬುರಗಿ ಮೂಲದವರು ಎಂದು ತಿಳಿದುಬಂದಿದೆ.
ಮೃತರು ಕಲಬುರಗಿ ಜಿಲ್ಲೆ ಅಪ್ಜಲಪುರದ ಗಿರೀಶ ಬಳ್ಳೋರಗಿ, ರಾಹುಲ್ ಮ್ಯಾಲೇಶಿ, ಸಂಗು ಅಮರಗೊಂಡ ಸಾವಣಪ್ಪಿದ್ದಾರೆ. ರಾಧಿಕಾ ಮ್ಯಾಲೇಶಿ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ.
ಕೊಲ್ಹಾಪುರ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೋಗಿ ಮರಳಿ ಬರುವಾಗ ಘಟನೆ ನಡೆದಿದೆ. ಸ್ಥಳಕ್ಕೆ ಅಥಣಿ ಠಾಣೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

