ಅಥಣಿ ವೈದ್ಯನ ಅಪಹರಿಸಿ ಮಾರಣಾಂತಿಕ ಹಲ್ಲೆ ; ಆಸ್ಪತ್ರೆಗೆ ದಾಖಲು
ಅಥಣಿ : ವೈದ್ಯನನ್ನು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಅಥಣಿ ತಾಲೂಕಿನ ಸವದಿ ಗ್ರಾಮದಲ್ಲಿ ಘಟನೆ ನಡೆದಿದೆ.
ತಾಲೂಕಿನ ಮಹಿಷವಾಡಗಿ ಗ್ರಾಮದ ಡಾ.ಆನಂದ ಉಪಾಧ್ಯಾಯ ಎಂಬುವವರನ್ನು ಗುರುವಾರ ತಡರಾತ್ರಿ ಅಪಹರಣ ಮಾಡಲಾಗಿತ್ತು. ನಂತರ ಈತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ವೈದ್ಯನನ್ನು ಆರೋಪಿಗಳು ಬಿಟ್ಟು ಹೋಗಿದ್ದರು.
ಈ ಕುರಿತು ವೈದ್ಯನ ಕುಟುಂಬದವರು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ವೈದ್ಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.


