ಅಥಣಿ : ಪಟ್ಟಣದಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ.

ಪಟ್ಟಣದ ಐನಾಪುರ ರಸ್ತೆಯಲ್ಲಿರುವ ಪ್ರಾರ್ಥನಾ ಕಾಲೇಜು ಬಳಿ ಬುಲೆರೊ ವಾಹನ ಹಾಗೂ ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದೆ.

ಘಟನೆಯಲ್ಲಿ ಬುಲೆರೊ ವಾಹನ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ವ್ಯಕ್ತಿ ಅಥಣಿ ನಿವಾಸಿ ಶಂಕರ ಪೂಜಾರಿ ಎಂದು ಗುರುತಿಸಲಾಗಿದೆ. ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.