ಅಥಣಿ : ಹಣಕಾಸಿನ ವಿಚಾರವಾಗಿ ನಡೆದ ಜಗಳದಲ್ಲಿ ಮಗುವನ್ನು ಕೊಂದ ಕಿರಾತಕ
ಅಥಣಿ:- ಹಣಕಾಸಿನ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದ್ದು, ಮಗುವೊಂದು ಬಲಿಯಾದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬುರ್ಲಟ್ಟಿ ಗ್ರಾಮದಲ್ಲಿ ನಡೆದಿದೆ.
ಶ್ರೀನಿಧಿ ಕಾಡಪ್ಪ ಕಾಳಾಪಾಟೀಲ್ (3) ಮೃತ ದುರ್ದೈವಿ. ಹಣಕಾಸಿನ ವಿಚಾರವಾಗಿ ಎರಡು ಕುಟುಂಬಗಳ ನಡುವೆ ಜಗಳ ನಡೆದಿದೆ. ಈ ಸಂದರ್ಭದಲ್ಲಿ ಜೋತಿಭಾ ತುಕಾರಾಮ ಬಾಬಾಬರ ಎಂಬಾತ ಮಗುವಿನ ಎದೆ ಮೇಲೆ ಕಾಲಿಟ್ಟ ಪರಿಣಾಮ ಮಗು ಸಾವಣಪ್ಪಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಐಗಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.