ಅಥಣಿ ದಂಪತಿ ಸಾವು ಪ್ರಕರಣ ; ಕೊಲೆ ಶಂಕೆ ವ್ಯಕ್ತಪಡಿಸಿದ ಎಸ್ಪಿ
ಅಥಣಿ : ಪಟ್ಟಣದ ಹೊರವಲಯದ ಚವ್ಹಾಣ ವಸತಿ ತೋಟದಲ್ಲಿ ನಿನ್ನೆ ಬುಧವಾರ ಕೊಳೆತ ಸ್ಥಿತಿಯಲ್ಲಿ ದಂಪತಿಯ ಶವದ ಪತ್ತೆಯಾಗಿದ್ದು ಕೊಲೆ ಅನುಮಾನ ವ್ಯಕ್ತವಾಗಿದೆ.
ನಾನಾಸಾಹೇಬ ಬಾಬು ಚವ್ಹಾಣ(58) ಮತ್ತು ಜಯಶ್ರೀ ಚವ್ಹಾಣ (50) ದಂಪತಿ ಸಾವು ಆತ್ಮಹತ್ಯೆಯಲ್ಲ ಕೊಲೆ ಶಂಕೆ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೆದ್ ಹೇಳಿದರು.
ಗುರುವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದ ಇವರು. ದಂಪತಿಗಳ ಮಗ ಬೇರೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿ ಇರುವುದರಿಂದ ಅವರು ಮಾನಸಿಕವಾಗಿ ಕೊರಗಿ ಆತ್ಮಹತ್ಯೆ ಮಾಡಿಕೊಂಡಿರಬಹುದು
ಎಂಬ ಶಂಕೆ ವ್ಯಕ್ತಪಡಿಸಲಾಗಿತ್ತು ಆದರೆ ನಮ್ಮ ಪೊಲೀಸ್ ಇಲಾಖೆಯ ತನಿಖೆಯ ಪ್ರಕಾರ ದುಷ್ಕರ್ಮಿಗಳು ಕಲ್ಲಿನಿಂದ ಬಾಗಿಲನ್ನು ಮುರಿದು ಒಳಗೆ ಹೋಗಿ ಅವರನ್ನು ಕೊಲೆ ಮಾಡಿರುವ ಸಂದೇಹ ವ್ಯಕ್ತವಾಗುತ್ತಿದೆ.
ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ಅಥಣಿ ಪೊಲೀಸರು ಮರಣೋತ್ತರ ಪರೀಕ್ಷೆ ಮುಗಿಸಿ ಸಂಬಂಧಿಕರಿಗೆ ಮೃತ ದೇಹಗಳನ್ನು ಹಸ್ತಾಂತರಿಸಿದ್ದಾರೆ. ಕೊಲೆ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದ್ದು, ಶೀಘ್ರದಲ್ಲಿಯೇ ಆರೋಪಿಗಳನ್ನು ಪತ್ತೆಹಚ್ಚಲಾಗುವುದು ಎಂದರು.