ಅಥಣಿ :- ಚಿಂಚಲಿ ಮಾಯಕ್ಕ ದೇವಿ ಭಕ್ತರಿದ್ದ ಟ್ರ್ಯಾಕ್ಟರ್ ಪಲ್ಟಿ
ಅಥಣಿ : ಚಿಂಚಲಿ ಮಾಯಕ್ಕ ದೇವಿ ದರ್ಶನಕ್ಕೆ ತೆರಳುತ್ತಿದ್ದ ಭಕ್ತರ ಟ್ಯಾಕ್ಟರ್ ಪಲ್ಟಿಯಾದ ಘಟನೆ ನಡೆದಿದೆ.
ಅಥಣಿ ತಾಲೂಕಿನ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ದರೂರ ಸಮೀಪದ ಸೇತುವೆ ತಿರುವಿನಲ್ಲಿ ಅಪಘಾತ ಸಂಭವಿಸಿದೆ. ಟ್ರ್ಯಾಕ್ಟರ್ ನಲ್ಲಿ ಭಕ್ತರು ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಘಟನೆ ನಡೆದಿದೆ.
ಇನ್ನೂ ಅಪಘಾತ ಸಂಭವಿಸಿದ ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಜೊತೆಗೆ ಕೆಲವರನ್ನು ರಕ್ಷಣೆ ಮಾಡಿದ್ದಾರೆ. ಗಾಯಳುಗಳ ವಿವರ ಸ್ಪಷ್ಟವಾಗಿ ಬೆಳಗಾವಿ ವಾಯ್ಸ್ ಗೆ ತಿಳಿದುಬಂದಿಲ್ಲ.
ಅಥಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.


