
Video-ಅಥಣಿ : ನಿಂತಿದ್ದ ಬೈಕ್ ಗೆ ಹೊತ್ತಿಕೊಂಡ ಬೆಂಕಿ, ಮುಂದೆನಾಯ್ತು.?

ಅಥಣಿ : ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ತೇಲಸಂಗ ಗ್ರಾಮದಲ್ಲಿ ನಿಲ್ಲಿಸಿದ ದ್ವಿಚಕ್ರ ವಾಹನದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಬೆಂಕಿ ನಂದಿಸಲು ಜನ ಹರಸಾಹಸ ಪಟ್ಟ ಘಟನೆ ನಡೆದಿದ್ದು ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್ ಆಗಿದೆ.
ತೇಲಸಂಗ್ ಗ್ರಾಮದ ಕೆವಿಜಿ ಬ್ಯಾಂಕ್ ಎದುರುಗಡೆ ನಿಲ್ಲಿಸಿದ ಬೈಕ್ ನಲ್ಲಿ ಬೆಂಕಿ ಕಾಣಿಸಿಕೊಂಡಿ,ದ್ದು ಸ್ಥಳೀಯರು ಒಂದು ಕ್ಷಣ ಗಾಬರಿಗೊಂಡಿದ್ದರು.
ಬೆಂಕಿ ಹೆಚ್ಚಾಗುತ್ತಿದ್ದಂತೆ ಸ್ಥಳೀಯರು ನೀರು ಎರಚಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಐಗಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.