Select Page

Advertisement

ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ ; ಮೊದಲ ವಿಕೆಟ್ ಭೀತಿಯಲ್ಲಿ ಕಾಂಗ್ರೆಸ್

ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ ; ಮೊದಲ ವಿಕೆಟ್ ಭೀತಿಯಲ್ಲಿ ಕಾಂಗ್ರೆಸ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನವಾಗಲಿದ್ದು, ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ವಾಲ್ಮೀಕಿ ನಿಗಮದ ಅಧಿಕಾರಿ ಪಿ. ಚಂದ್ರಶೇಖರ್ ಅವರ ಆತ್ಮಹತ್ಯೆ ಪ್ರಕರಣ ಸರ್ಕಾರಕ್ಕೆ ಭಾರಿ ತಲೆನೋವಾಗಿದ್ದು, ವಿಪಕ್ಷಗಳ ಒತ್ತಡಕ್ಕೆ ಮಣಿದ ಸರ್ಕಾರ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಪ್ರಕರಣವನ್ನು ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕು ಮತ್ತು ಸಂಬಂಧಪಟ್ಟ ಸಚಿವ ನಾಗೇಂದ್ರ ಅವರ ರಾಜೀನಾಮೆ ಪಡೆಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದರು.

ಪ್ರಕರಣವನ್ನು ಸಿಬಿಐಗೆ ವಹಿಸುವ ಹಿನ್ನೆಲೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇಂದು ಮಧ್ಯಾಹ್ನ ಅಥವಾ ಸಂಜೆ ಅವರು ರಾಜೀನಾಮೆ ನೀಡುವ ಸಾಧ್ಯತೆಯಿದೆ.

Advertisement

Leave a reply

Your email address will not be published. Required fields are marked *

error: Content is protected !!