ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್ ಪತನ ; ಸಚಿವ ಬಿ. ನಾಗೇಂದ್ರ ರಾಜೀನಾಮೆ
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರದ ಹಿನ್ನಲೆಯಲ್ಲಿ ಸಿದ್ದು ಸರ್ಕಾರದ ಸಚಿವ ಬಿ. ನಾಗೇಂದ್ರ ರಾಜೀನಾಮೆ ನೀಡಿದ್ದಾರೆ.
ಭ್ರಷ್ಟಾಚಾರ ಆರೋಪದಲ್ಲಿ ಕಾಂಗ್ರೆಸ್ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ. ಬೆಂಗಳೂರಿನಲ್ಲಿ ನಡೆದ ಸುದ್ದಿಘೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವ ಬಿ. ನಾಗೇಂದ್ರ. ನನ್ನ ಸ್ವ ಇಚ್ಛೆಯಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.
ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಮೇಲೆ ಮಾಡಿರುವ ಆರೋಪ ಸುಳ್ಳು. ಮತ್ತೆ ನಿರ್ದೋಷಿಯಾಗಿ ಬರುವ ವಿಶ್ವಾಸ ಇದೆ. ಸಂಜೆ 7 ಗಂಟೆಗೆ ಸಿಎಂ ಅವರನ್ನು ಭೇಟಿಮಾಡಿ ರಾಜೀನಾಮೆ ಸಲ್ಲಿಸುತ್ತೇನೆ ಎಂದು ಸಚಿವರು ಹೇಳಿದರು.