ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಭ್ರಷ್ಟಾಚಾರ ಆರೋಪ ಹೊತ್ತ ಸಚಿವ ಬಿ.ನಾಗೇಂದ್ರ ಮುಖ್ಯಮಂತ್ರಿಗಳಿಗೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.

ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಉದ್ದೇಶದಿಂದ ನಾನು ರಾಜೀನಾಮೆ ಕುರಿತು ನಿರ್ಧಾರ ಕೈಗೊಳ್ಳಲಿದ್ದೇನೆ ಎಂದು ಸಚಿವ ನಾಗೇಂದ್ರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು.

ಅಧಿವೇಶದಲ್ಲಿ ದೊಡ್ಡ ಮಟ್ಟದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಿತ್ತು. ಅಷ್ಟೇ ಅಲ್ಲದೆ ರಾಯಚೂರಿನಿಂದ ಬಳ್ಳಾರಿ ವರೆಗೆ ಪಾದಯಾತ್ರೆ ಮಾಡಲು ನಿರ್ಧಾರ ಕೈಗೊಂಡಿತ್ತು.

ಸಚಿವ ಬಿ. ನಾಗೇಂದ್ರ ಕೊನೆಗೂ ವಿಪಕ್ಷಗಳ ಹೋರಾಟಕ್ಕೆ ಮಣಿದು ರಾಜೀನಾಮೆ ನೀಡುವ ನಿರ್ಧಾರ ಕೈಗೊಂಡಿದ್ದು ಕೆಲವೇ ಕ್ಷಣದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ರಾಜೀನಾಮೆ ನೀಡಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳಿಂದ ತಿಳಿದುಬಂದಿದೆ.