
Breaking : ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ; ಬಂಧನ ಸಾಧ್ಯತೆ

ಬೆಂಗಳೂರು : ಕಳೆದ ಮೂರು ತಿಂಗಳ ಹಿಂದೆ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಧ್ಯ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಬಂಧನದ ಭೀತಿ ಎದುರಾಗಿದ್ದು, ಈ ಪ್ರಕರಣ ಕುರಿತು ಕೋರ್ಟ್ ಅರೆಸ್ಟ್ ವಾರೆಂಟ್ ನೀಡಿದೆ.
ಯಡಿಯೂರಪ್ಪ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವರ್ಗಾಯಿಸಿತ್ತು. ಈ ಕುರಿತು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ನೋಟಿಸ್ ನೀಡಿದ್ದರು, ಆದರೆ ಇವರು ಸಮಯಾವಕಾಶ ಕೇಳಿದ್ದರು.
ಈ ಕುರಿತು ಯಡಿಯೂರಪ್ಪ ಪರ ವಕೀಲರು ಜಾಮೀನು ನೀಡುವಂತೆ ಹೈಕೋರ್ಟ್ ಮೊರೆ ಹೋಗಿತ್ತು. ಸಧ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಅಗತ್ಯ ಬಿದ್ದರೆ ಯಡಿಯೂರಪ್ಪ ಅವರನ್ನು ಬಂಧಿಸುತ್ತೇವೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿಕೆ ನೀಡಿದ್ದಾರೆ.
ತಮ್ಮ ಸಮಸ್ಯೆ ಹೇಳಿಕೊಳ್ಳಲು ಯಡಿಯೂರಪ್ಪ ಮನೆಗೆ ಹೋದ ಸಂದರ್ಭದಲ್ಲಿ ಮಹಿಳೆಯ ಮಗಳಿಗೆ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ ಎಂದು ಆರೋಪಿಸಿ ಮಾರ್ಚ್ 14 ರಂದು ದೂರು ದಾಖಲಿಸಿದ್ದರು. ಆದರೆ ಮಹಿಳೆ ಈ ಹಿಂದೆ ಇದೇ ರೀತಿಯಲ್ಲಿ ಸುಮಾರು 50 ಕ್ಕೂ ಅಧಿಕ ಜನರ ಮೇಲೆ ಪ್ರಕರಣದ ದಾಖಲಿಸಿದ್ದಾರೆ ಎಂಬುದು ತಿಳಿದುಬಂದಿತ್ತು.
B s yadiyurappa pocso Act bsy Bengalore