ಹಿರಿಯ ನಟಿ ಬಿ. ಸರೋಜಾದೇವಿ ನಿಧನ
ಬೆಂಗಳೂರು : ಖ್ಯಾತ ಬಹುಭಾಷಾ ನಟಿ ಬಿ. ಸರೋಜಾದೇವಿ (87) ಇಂದು ನಗರದ ಕೋಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಗಳಿಂದ ಬಳಲುತ್ರಿದ್ದ ಇವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಡಾ. ರಾಜಕುಮಾರ ಸೇರಿದಂತೆ ಕನ್ನಡದ ಖ್ಯಾತ ನಟರ ಜೊತೆ ನಟನೆ ಮಾಡಿದ್ದ ಸರೋಜಾದೇವಿ ಅವರು ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದರು.


