
ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ ; ಯುವ ನಾಯಕನಿಗೆ ಪಟ್ಟ ಕಟ್ಟಿದ ಕಮಲ ಪಡೆ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಮಗನಾದ ಬಿ.ವೈ ವಿಜಯೇಂದ್ರ ಅವರನ್ನು ನೇಮಕ ಮಾಡಿ ಬಿಜೆಪಿ ಹೈಕಮಾಂಡ್ ಆದೇಶ ಹೊರಡಿಸಿದೆ.
ಕೊನೆಗೂ ಅಳೆದೂ ತೂಗಿ ಬಿಜೆಪಿ ಹೈಕಮಾಂಡ್ ವಿಜಯೇಂದ್ರ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ನೀಡಿದ್ದು, ಕರ್ನಾಟಕ ಲಿಂಗಾಯತ ಮತಗಳನ್ನು ಒಂದೆಡೆ ಸೇರಿಸುವ ಲೆಕ್ಕಾಚಾರದಲ್ಲಿ ತೊಡಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನ ನಂತರ ನಳೀನ್ ಕುಮಾರ್ ಕಟೀಲ್ ಅವರನ್ನು ಬದಲಾಯಿಸಬೇಕು ಎಂಬ ಮಾತು ಎಲ್ಲೆಡೆ ಕೇಳಿಬರುತ್ತಿತ್ತು. ಸಧ್ಯ ವಿಜಯೇಂದ್ರ ಅವರಿಗೆ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲಾಗಿದೆ.