Select Page

Advertisement

ಜೊಲ್ಲೆ ಕೋಟೆಯಲ್ಲಿ ನಿಂತು ಗುಡುಗಿದ ವಿಜಯೇಂದ್ರ

ಜೊಲ್ಲೆ ಕೋಟೆಯಲ್ಲಿ ನಿಂತು ಗುಡುಗಿದ ವಿಜಯೇಂದ್ರ

ನಿಪ್ಪಾಣಿ : ಲೋಕಸಭಾ ಚುನಾವಣೆ ಸೋಲಿನ ನಂತರ ಯಡಿಯೂರಪ್ಪ ಕುಟುಂಬದಿಂದ ಅಂತರ ಕಾಯ್ದುಕೊಂಡಿದ್ದ ಮಾಜಿ ಸಂಸದ ಅಣ್ಣಾಸಾಹೇಬ್ ಜೊಲ್ಲೆ ಸಧ್ಯ ಯತ್ನಾಳ್ ಉಚ್ಚಾಟನೆ ನಂತರ ಸೈಲೆಂಟ್ ಆದಂತೆ ಕಂಡುಬರುತ್ತಿದೆ.

ಯತ್ನಾಳ್ ಬಣದ ಪ್ರಮುಖರಲ್ಲಿ ಒಬ್ಬರಾಗಿದ್ದ ಅಣ್ಣಾಸಾಹೇಬ್ ಜೊಲ್ಲೆ ಅವರು ವಿಜಯೇಂದ್ರ ನಾಯಕತ್ವಕ್ಕೆ ಸವಾಲ್ ಹಾಕಿದವರಲ್ಲಿ ಒಬ್ಬರು. ಆಸರೆ ಇಂದು ನಿಪ್ಪಾಣಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲ್ಲವನ್ನೂ ಬದಿಗಿಟ್ಟು ರಾಜ್ಯ ಬಿಜೆಪಿ ನಾಯಕರ ಜೊತೆ ಜೊಲ್ಲೆ ಬೆರೆತಿದ್ದರು.

ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರು ನಿಪ್ಪಾಣಿ ಭೇಟಿ ಹಿನ್ನಲೆಯಲ್ಲಿ ಬಿಜೆಪಿ ವತಿಯಿಂದ ಭೀಮ ಹೆಜ್ಜೆ 100 ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಾಂಗ್ರೆಸ್ ಸರಕಾರ ವಿರುದ್ಧ ಹರಿಹಾಯ್ದರು.‌

ಕಾಂಗ್ರೆಸ್ ಪಕ್ಷ ದಲಿತರ ಪರ ಎಂದು ಹೇಳಿಕೊಳ್ಳುತ್ತ ಸಮುದಾಯದ ಜನರಿಗೆ ಮೋಸ ಮಾಡಿದೆ. ಅಂಬೇಡ್ಕರ್ ಅವರಿಗೆ ನಿರಂತರವಾಗಿ ಅವಮಾನ ಮಾಡಿದ ಕಾಂಗ್ರೆಸ್ ಪಕ್ಷವನ್ನು ಜನ ಯಾವುದೇ ಕಾರಣಕ್ಕೂ ಕ್ಷಮಿಸಲ್ಲ ಎಂದರು.

ಭೀಮ ಹೆಜ್ಜೆ ಶತಮಾನ ಸಂಭ್ರಮಕ್ಕೆ ಬಿಜೆಪಿಯ ಹಿರಿಯ ನಾಯಕರು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು. ಈ ಸಂದರ್ಭದಲ್ಲಿ ಆರ್ ಅಶೋಕ್, ಗೋವಿಂದ ಕಾರಜೋಳ, ಶಶಿಕಲಾ‌ ಜೊಲ್ಲೆ, ಅಣ್ಣಾಸಾಹೇಬ್ ಜೊಲ್ಲೆ, ಗೋವಿಂದ ಕಾರಜೋಳ ಸೇರಿದಂತೆ ಮುಂತಾದ ನಾಯಕರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!