ಸ್ವಾಸ್ಥ್ಯ ಸಮಾಜ ನಿರ್ಮಾಣ ನಿಟ್ಟಿನಲ್ಲಿ ಪೊಲೀಸರಿಂದ ಜಾಗೃತಿ ಅಭಿಯಾನ
ಬೈಲಹೊಂಗಲ- ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ಯುವಕರ ಪಾತ್ರ ಪ್ರಮುಖವಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಎಸ್ಪಿ ವೇಣುಗೋಪಾಲ ಹೇಳಿದರು.
ಅವರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಗುರುವಾರ ಹೆಲ್ಮೆಟ್ ಹಾಗೂ ಮಾದಕ ವಸ್ತುಗಳ ಬಳಕೆ ಅದರ ದುಷ್ಪರಿಣಾಮಗಳ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಹಾಗೂ ಸೀಟ್ ಬೆಲ್ಟ್ ಧರಿಸಬೇಕು.
ವಾಹನ ಸವಾರರು ರಸ್ತೆ ನಿಯಮ ಕಡ್ಡಾಯವಾಗಿ ಪಾಲನೆ ಮಾಡಬೇಕು. ಈ ಬಗ್ಗೆ ಜಾಗೃತರಾಗಿ ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು ಎನ್ನುವ ಸಂದೇಶ ನೀಡಲಾಯಿತು.
ಮಾದಕ ವಸ್ತು ಸೇವನೆ, ಮಾರಾಟ ಮತ್ತು ಸಾಗಾಟ ಕಾನೂನು ಪ್ರಕಾರ ಅಪರಾಧ. ಯುವ ಸಮುದಾಯ ಇಂತಹ ಕೃತ್ಯದಲ್ಲಿ ತೊಡಗಿಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಇದನ್ನು ನಿಯಂತ್ರಿಸಲು ಪ್ರಜ್ಞಾವಂತ ಯುವಕರು ಹಾಗೂ ವಿದ್ಯಾರ್ಥಿಗಳು ಮುಂದಾಗಬೇಕಿದೆ ಎಂದರು.
ನಗರದ ವಿವಿಧ ರಸ್ತೆಗಳಲ್ಲಿ ಪೊಲೀಸ್ ಪಡೆ ಶಿಸ್ತುಬದ್ಧವಾಗಿ ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಸಂಚಾರ ನಡೆಸಿ ಜನರ ಗಮನ ಸೆಳೆಯಿತಲ್ಲದೇ ನಿಯಮ ಪಾಲಿಸುವಂತೆ ಸಂದೇಶ ನೀಡಿದರು.
ಪಿಐ ಪಂಚಾಕ್ಷರಿ ಸಾಲಿಮಠ ಹಾಗೂ ಪೊಲೀಸ್ ಸಿಬ್ಬಂದಿಗಳು ಇದ್ದರು.