ನೇಣು ಬಿಗಿದುಕೊಂಡು ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು
ಬೈಲಹೊಂಗಲ : ಪಟ್ಟಣದ ಬಾಲಕರ ವಸತಿ ನಿಲಯದ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೈಲಹೊಂಗಲ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಪರಶುರಾಮ ಯಲ್ಲಪ್ಪ ಕೊನೆರಿ (18) ಮಂಗಳವಾರ, ಎಂ.ಜಿ ಕಾಲೋನಿಯ ಬಾಲಕರ ವಸತಿ ನಿಲಯದಲ್ಲಿ
ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಘಟನಾ ಸ್ಥಳಕ್ಕೆ ಸಿಪಿಐ ಉಳವಪ್ಪ ಸಾತೇನಹಳ್ಳಿ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಸಿ ಬಿ ಯಮನೂರ ಭೇಟಿ ನೀಡಿ ಸಿಸಿಟಿವಿ ಪರಿಶೀಲಿಸಿದ್ದಾರೆ. ಜೊತೆಗೆ ಮೃತ ವಿದ್ಯಾರ್ಥಿ ಸಹಪಾಠಿಗಳಿಂದ ಮಾಹಿತಿ ಒಡೆದುಕೊಂಡಿದ್ದು, ಸಾವಿನ ನಿಖರ ಕಾರಣ ತಿಳಿದುಬಂದಿಲ್ಲ.