Select Page

Advertisement

ಸಹೋದರಿಯಿಂದ ಸಾಹುಕಾರ್ ಗೆ ಶ್ರೀರಕ್ಷೆ ; ಹಬ್ಬದ ಸಡಗರದಲ್ಲಿ ಬಾಲಚಂದ್ರ ಜಾರಕಿಹೊಳಿ

ಸಹೋದರಿಯಿಂದ ಸಾಹುಕಾರ್ ಗೆ ಶ್ರೀರಕ್ಷೆ ; ಹಬ್ಬದ ಸಡಗರದಲ್ಲಿ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.

ಸೋಮವಾರ ನಗರದ ಹೊಸಪೇಟೆ ರಸ್ತೆಯಲ್ಲಿರುವ ತಮ್ಮ ಲಕ್ಷ್ಮೀ ನಿವಾಸದಲ್ಲಿ ಸಹೋದರಿ ಲಕ್ಷ್ಮೀ ಅವರಿಂದ ರಾಖಿ ಕಟ್ಟಿಸಿಕೊಂಡು ಮಾತನಾಡಿದ ಅವರು. ಪ್ರತೀ ವರ್ಷವೂ ಈ ರಾಖಿ ಹಬ್ಬವನ್ನು ನಾವೆಲ್ಲ ಆಚರಿಸಿಕೊಂಡು ಬರುತ್ತಿದ್ದೇವೆ.

ಸಹೋದರಿಯರು ಸಮಾಜದ ದುಷ್ಟ ಶಕ್ತಿಗಳಿಂದ ರಕ್ಷಿಸಲೆಂದು ತಮ್ಮ ಸಹೋದರರಿಗೆ ರಾಖಿಯನ್ನು ಕಟ್ಟುತ್ತಾರೆ. ಪ್ರತಿಯಾಗಿ ಸಹೋದರರು ಕೂಡ ತಮ್ಮ ಭ್ರಾತತ್ವ ಪ್ರೀತಿಯನ್ನು ಉಜ್ವಲಗೊಳಿಸಲು ಸಹೋದರಿಯರಿಗೆ ಬೆನ್ನೆಲುಬಾಗಿ ನಿಲ್ಲುತ್ತಾರೆ ಎಂದು ತಿಳಿಸಿದರು.

ಪ್ರಾಚೀನ ಕಾಲದಿಂದಲೂ ಶ್ರಾವಣ ಮಾಸದಲ್ಲಿ ಆಚರಿಸುವ ರಕ್ಷಾ ಬಂಧನವು ಒಡ ಹುಟ್ಟಿದವರ ನಡುವಿನ ವಾತ್ಸಲ್ಯವನ್ನು ಬಿಂಬಿಸುವ ಹಬ್ಬವೇ ಈ ರಕ್ಷಾ ಬಂಧನವಾಗಿದೆ ಎಂದು ಅವರು ಹೇಳಿದರು.

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸಹೋದರಿಯಾದ ಲಕ್ಷ್ಮಿ ಅವರು ಬಾಲಚಂದ್ರ ಜಾರಕಿಹೊಳಿ ಅವರಿಗೆ ಹಣೆಗೆ ತಿಲಕವನ್ನಿಟ್ಟು ಆರತಿಯನ್ನು ಬೆಳಗಿ ಅವರಿಗೆ ರಾಖಿಯನ್ನು ಕಟ್ಟುವ ಮೂಲಕ ಈ ಮಹತ್ವಪೂರ್ಣ ರಕ್ಷಾ ಬಂಧನ ಹಬ್ಬಕ್ಕೆ ಸಾಕ್ಷಿಯಾದರು.

ಈ ಸಂದರ್ಭದಲ್ಲಿ ಲಕ್ಷ್ಮೀ ನಾಯಕ ಅವರ ಪುತ್ರ ಅಭಿಷೇಕ ಮತ್ತು ಪುತ್ರಿ ಅರುಣಾ ಅವರು ಉಪಸ್ಥಿತರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!