ಕುಮಾರಸ್ವಾಮಿ ಜೊತೆ ಸಾಹುಕಾರ್ ಗುಪ್ತ ಸಭೆ – ಮಹತ್ವದ ಬೆಳವಣಿಗೆ ಸಾಕ್ಷಿಯಾಗುತ್ತಾ ಇಬ್ಬರ ಭೇಟಿ
ಬೆಂಗಳೂರು / ಬೆಳಗಾವಿ : ಕಳೆದ ಕೆಲವು ದಿನಗಳಿಂದ ಚುನಾವಣೆ ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್ ಪಕ್ಷ ಈಗಾಗಲೆ ಅನೇಕ ನಾಯಕರ ಜೊತೆ ಮಾತುಕತೆ ನಡೆಸಿದ್ದು , ಪಕ್ಷಕ್ಕೆ ಸೇರಿಸಿಕೊಳ್ಳುವ ಪ್ರಯತ್ನ ಮುಂದುವರಿಸಿದೆ. ಇದೀಗ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಕುಮಾರಸ್ವಾಮಿ ಅವರನ್ನು ಭೇಟಿಯಾಗಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಹೌದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಬಿಜೆಪಿ ಶಾಸಕ ಭಾಲಚಂದ್ರ ಜಾರಕಿಹೊಳಿ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ನಾಯಕರಾದ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದು ಈಗಾಗಲೇ ಹಲವು ಆಯಾಮಗಳಲ್ಲಿ ಚರ್ಚೆ ನಡೆಯುತ್ತಿದೆ. ಚುನಾವಣೆ ಹೊಸ್ತಿಲಲ್ಲಿ ಬಿಜೆಪಿ ಮುಖಂಡ ಬಾಲಚಂದ್ರ ಜಾರಕಿಹೊಳಿ ಕುಮಾರಸ್ವಾಮಿ ಭೇಟಿ ಮಾಡಿದ್ದು ಮುಂಬರುವ ದಿನಗಳಲ್ಲಿ ಬಾಲಚಂದ್ರ ಜಾರಕಿಹೊಳಿ ಜೆಡಿಎಸ್ ಕಡೆ ವಾಲುತ್ತಾರಾ ಎಂಬ ಚರ್ಚೆ ನಡೆಯುತ್ತಿದೆ.
ಈ ಹಿಂದೆ ಬಾಲಚಂದ್ರ ಜಾರಕಿಹೊಳಿ ಜೆಡಿಎಸ್ ಪಕ್ಷದಲ್ಲಿದ್ದರು. ಜೊತೆಗೆ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಬದಲಾದ ರಾಜಕೀಯ ಕಾಲಘಟ್ಟದಲ್ಲಿ ಅವರು ಬಿಜೆಪಿ ಸೇರ್ಪಡೆಯಾಗಿದ್ದರು. ಸಧ್ಯಕ್ಕೆ ನಡೆತುತ್ತಿರುವ ಮಹತ್ವದ ಬೆಳವಣಿಗೆಯಲ್ಲಿ ಬಾಲಚಂದ್ರ ಜಾರಕಿಹೊಳಿ ಅವರು ಕುಮಾರಸ್ವಾಮಿ ಭೇಟಿ ನಡೆಸಿದ್ದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ ನಡೆಯುವಂತೆ ಮಾಡಿದೆ.
ಸಹೋದರ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಲು ಹಿಂದೇಟು ಹಾಕುತ್ತಿರುವ ಬಿಜೆಪಿ ಹೈಕಮಾಂಡ್ ನಡೆಗೆ ಬೇಸತ್ತು ಬಾಲಚಂದ್ರ ಜಾರಕಿಹೊಳಿ ಜೆಡಿಎಸ್ ನತ್ತ ಮುಖ ಮಾಡಿದ್ರಾ ಎಂಬ ಮಾತು ಕೇಳಿಬರುತ್ತಿದ್ದು ಮುಂಬರುವ ದಿನಗಳಲ್ಲಿ ಈ ಕುರಿತು ಸ್ಪಷ್ಟ ಚಿತ್ರಣ ಗೋಚರಿಸಲಿದೆ.