ಬಸವನ-ಕುಡಚಿ ಪ್ರಾಥಮಿಕ ಕೃಷಿ ಪತ್ತಿನ ಸಂಘದ ಅಮೃತ ಮಹೋತ್ಸವ
ಬೆಳಗಾವಿ : ತಾಲೂಕಿನ ಬಸವನ – ಕುಡಚಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮ ಜರುಗಿತು.
ಮಹೇಂದ್ರ ಪಾಟೀಲ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಮಾಡಲಾಯಿತು. ಜೊತೆಗೆ ನೀಟ್ ಪರೀಕ್ಷೆಯಲ್ಲಿ ಸಾಧನೆ ತೋರಿದ ಮಕ್ಕಳಿಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಶಂಕರಗೌಡ ಪಾಟೀಲ್, ಬಿಜೆಪಿ ರಾಜ್ಯ ವಕ್ತಾರ ಹಾಗೂ ವಕೀಲ ಎಂ ಬಿ ಜಿರಲಿ, ಮಾಜಿ ಶಾಸಕ ಸಂಜಯ್ ಪಾಟೀಲ್, ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಜು ಅಂಕಲಗಿ, ಉದ್ಯಮಿ ಭರತ್ ಪಾಟೀಲ್, ವಿಜಯ್ ಕದಂ, ಸಂಜೀವ್ ಜನಗೌಡರ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.