ಬೆಳಗಾವಿ : ಜೆಜಿಎನ್ಡಿ ಭರತೇಶ ವಾಣಿಜ್ಯ ಮಹಾವಿದ್ಯಾಲಯ, ಬೆಳಗಾವಿ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಎನ್ಎಸ್ಎಸ್ ಸಂಸ್ಥಾಪನಾ ದಿನಾಚರಣೆಯನ್ನು ಸೆಪ್ಟೆಂಬರ್ 24, 2026ರಂದು ಬೆಳಗಾವಿಯ ಬಸವನ ಕುಡಚಿಯ BHMC ಸಭಾಂಗಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮವನ್ನು ಕೆಆರ್ಸಿಯು, ಬೆಳಗಾವಿಯ ಎನ್ಎಸ್ಎಸ್ ಸಂಯೋಜಕರಾದ ಡಾ. ಕನಕಪ್ಪ ಪೂಜಾರ ಅವರು ಉದ್ಘಾಟಿಸಿದರು. ಮೈ ಭಾರತ್ ಎನ್ಎಸ್ಎಸ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಲೋಕೇಶ ನಾಯಕ್ ಕೆ., GFGC, ದಾವಣಗೆರೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಧಾರವಾಡದ ಎನ್ಎಸ್ಎಸ್ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಶ್ರೀ ಶಿವಯೋಗಿ ಹಾವೇರಿ ಅವರು ಗೌರವ ಅತಿಥಿಗಳಾಗಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೆಜಿಎನ್ಡಿ ಭರತೇಶ ವಾಣಿಜ್ಯ ಮಹಾವಿದ್ಯಾಲಯದ ಜಿಸಿ ಅಧ್ಯಕ್ಷರಾದ ಶ್ರೀ ಹಿರಾಚಂದ ಕಲ್ಮಣಿ ವಹಿಸಿದ್ದರು.
ಮಹಾವಿದ್ಯಾಲಯದ ಪ್ರಾಚಾರ್ಯರಾದ ಶ್ರೀಮತಿ ನೀತಾ ಗಂಗಾರಡ್ಡಿ ಅವರು ಗಣ್ಯರು, ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ಎನ್ಎಸ್ಎಸ್ ಸ್ವಯಂಸೇವಕರನ್ನು ಸ್ವಾಗತಿಸಿದರು. ಎನ್ಎಸ್ಎಸ್ ಕಾರ್ಯಕ್ರಮಾಧಿಕಾರಿ ಶ್ರೀ ಯಲ್ಲಪ್ಪ ಧಬಾಳಿ ಅವರು ಕಾರ್ಯಕ್ರಮವನ್ನು ಸಮನ್ವಯಗೊಳಿಸಿದರು.
ಕಾರ್ಯಕ್ರಮದಲ್ಲಿ ಗಣ್ಯರು ತಮ್ಮ ಎನ್ಎಸ್ಎಸ್ ಸೇವಾ ಅನುಭವಗಳನ್ನು ಹಂಚಿಕೊಂಡು, ವಿದ್ಯಾರ್ಥಿಗಳು ಮತ್ತು ಸ್ವಯಂಸೇವಕರು ಸಮಾಜ ಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ರಾಷ್ಟ್ರ ನಿರ್ಮಾಣದಲ್ಲಿ ತಮ್ಮ ಕೊಡುಗೆ ನೀಡುವಂತೆ ಪ್ರೇರೇಪಿಸಿದರು. “Not Me But You – ನಾನಲ್ಲ, ನೀನು” ಎಂಬ ಎನ್ಎಸ್ಎಸ್ ಧ್ಯೇಯವಾಕ್ಯದ ಮಹತ್ವವನ್ನು ವಿವರಿಸಲಾಯಿತು.
ಎನ್ಎಸ್ಎಸ್ ಸ್ವಯಂಸೇವಕರು ಹಾಗೂ ವಿದ್ಯಾರ್ಥಿಗಳ ಸಕ್ರಿಯ ಭಾಗವಹಿಸುವಿಕೆಯಿಂದ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಿತು. ಕೊನೆಯಲ್ಲಿ ವಂದನಾರ್ಪಣೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಯಿತು.




