ಅಥಣಿ : ಪಟ್ಟಣದ ಭರವಸೆ ಬೆಳಕು ಫೌಂಡೇಶನ್ ವತಿಯಿಂದ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಸಿ ನಡೆಯುವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ರೂಪಾ ಕಾಂಬಳೆ ಮಾತನಾಡಿ. ಪ್ರತಿ ವ್ಯಕ್ತಿಯೂ ಕನಿಷ್ಠ ಒಂದು ಸಸಿಯನ್ನು ನೆಟ್ಟು ಅದನ್ನು ಪೋಷಿಸುವ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಪರಿಸರ ರಕ್ಷಣೆಗೆ ತಮ್ಮ ಸಹಕಾರ ನೀಡುವುದಾಗಿ ಸಂಕಲ್ಪ ಮಾಡಿದರು.
ಕಾರ್ಯಕ್ರಮದಲ್ಲಿ ವಿವಿಧ ಸಸಿಗಳನ್ನು ನೆಡುವ ಮೂಲಕ ಪ್ರಕೃತಿ ಸಂರಕ್ಷಣೆ, ಪರಿಸರ ಸಮತೋಲನ ಮತ್ತು ಮುಂದಿನ ಪೀಳಿಗೆಗೆ ಹಸಿರು ಭವಿಷ್ಯ ನಿರ್ಮಿಸುವ ಸಂದೇಶವನ್ನು ನೀಡಲಾಯಿತು. ಮರಗಳು ಪರಿಸರದ ಸಮತೋಲನ ಕಾಪಾಡಲು, ಜೀವ ವೈವಿಧ್ಯತೆ ಉಳಿಸಲು ಮತ್ತು ಭವಿಷ್ಯದ ಪೀಳಿಗೆಗೆ ಉತ್ತಮ ವಾತಾವರಣ ಒದಗಿಸಲು ಮಹತ್ವದ ಪಾತ್ರವಹಿಸುತ್ತವೆ ಎಂಬ ಅರಿವು ಮೂಡಿಸಲಾಯಿತು.
ಪರಿಸರ ಸಂರಕ್ಷಣೆ ಹಾಗೂ ಹಸಿರು ಪರಿಸರ ನಿರ್ಮಾಣದ ಉದ್ದೇಶದಿಂದ ಭರವಸೆ ಬೆಳಕು ಫೌಂಡೇಶನ್ ವತಿಯಿಂದ
ಅರಣ್ಯ ಪ್ರದೇಶದಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಶ್ರೀಮತಿ ರೂಪಾ ಕಾಂಬಳೆ, ಕಾರ್ಯದರ್ಶಿ, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿ ಪರಿಸರ ಜಾಗೃತಿ ಮೂಡಿಸಿದರು.
ಭರವಸೆ ಬೆಳಕು ಫೌಂಡೇಶನ್ ವತಿಯಿಂದ ಪರಿಸರ ಜಾಗೃತಿ ಅಭಿಯಾನ


