Select Page

ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ

ಶಾಸಕ ಸ್ಥಾನಕ್ಕೆ ಬಸವರಾಜ ಬೊಮ್ಮಾಯಿ ರಾಜೀನಾಮೆ

ಬೆಂಗಳೂರು : ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ನೂತನ ಸಂಸದರಾಗಿ ಆಯ್ಕೆಯಾದ ಹಿನ್ನಲೆಯಲ್ಲಿ ಮಾಜಿ ಸಿಎಂ ಹಾಗೂ ಶಿಗ್ಗಾವಿ ಕ್ಷೇತ್ರದ ಬಿಜೆಪಿ ಶಾಸಕ ಬಸವರಾಜ ಬೊಮ್ಮಾಯಿ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು.

ಶನಿವಾರ ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಸ್ಪೀಕರ್ ಯು.ಟಿ ಖಾದರ್ ಅವರನ್ನು ಭೇಟಿ ಮಾಡಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಪ್ರತಿಪಕ್ಷದ ನಾಯಕ ಆರ್. ಅಶೋಕ್, ಶಾಸಕರಾದ ಜಿ.ಟಿ ದೇವೇಗೌಡ, ಮುನಿರಾಜು, ಡಾ. ಚಂದ್ರು ಲಮಾಣಿ ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್, ಮಾರುತಿ ಮೂಳೆ, ಬೋಜೆಗೌಡ ಹಾಜರಿದ್ದರು.

Advertisement

Leave a reply

Your email address will not be published. Required fields are marked *

error: Content is protected !!