ಪೊಲೀಸ್ ಅಧಿಕಾರಿ ಬಸವರಾಜ ಯಲಿಗಾರ ಅವರಿಗೆ ಗೌರವ ಡಾಕ್ಟರೇಟ್ ಪದವಿ

ಬೆಳಗಾವಿ : ವಿಜಯಪುರ ವಿಭಾಗದ ಡಿವೈಎಸ್ಪಿ ಬಸವರಾಜ ಯಲಿಗಾರ್ ಅವರಿಗೆ ಬೆಳಗಾವಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ನೀಡಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ಇದ್ದುಕೊಂಡು ಸಾಹಿತ್ಯ ಸೇವೆಯಲ್ಲಿ ತೊಡಗಿಸಿಕೊಂಡಿರುವ ಯಲಿಗಾರ್ ಅವರು ಬಸವಣ್ಣನವರ ಷಟಸ್ಥಲ ವಚನವನ್ನು ಇಂಗ್ಲಿಷ್ ಗೆ ಭಾಷಾಂತರಿಸುವ ಮೂಲಕ ವಿಶಿಷ್ಟ ಸಾಧನೆ ಮೆರೆದಿದ್ದಾರೆ.
ಯಲಿಗಾರ್ ಅವರ ಮೈ ಮಿ ಈಸ್ ದಿ ಕೃತಿಯನ್ನು ಅಮ್ಮ ಪಬ್ಲಿಕೇಷನ್ ಪ್ರಕಟಿಸಿದ್ದು 808 ಪುಟಗಳನ್ನು ಒಳಗೊಂಡಿದೆ. 1999 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಯಾಗಿರುವ ಯಲಿಗಾರ ಅವರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅತ್ಯಂತ ಸಮರ್ಪಕವಾಗಿ ಸೇವೆ ಸಲ್ಲಿಸುತ್ತಿದ್ದು ಸಧ್ಯ ವಿಜಯಪುರ ವಿಭಾಗದ ಡಿವೈಎಸ್ಪಿ ಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.


