11 ನೇ ಸುತ್ತಿನ ಮತ ಎಣಿಕೆಯಲ್ಲಿ ಶೆಟ್ಟರ್ ಭರ್ಜರಿ ಮುನ್ನಡೆ
ಬೆಳಗಾವಿ : ಲೋಕಸಭಾ ಚುನಾವಣೆ ಮತ ಎಣಿಕೆ ಕಾರ್ಯ ಮುಂದುವರಿದಿದ್ದು ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಹಾಗೂ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮುನ್ನಡೆ ಸಾಧಿಸಿದ್ದಾರೆ.
ಆರಂಭಿಕ ಹಂತದಿಂದಲೇ ಮುನ್ನಡೆ ಕಾಯ್ದುಕೊಂಡಿರುವ ಜಗದೀಶ್ ಶೆಟ್ಟರ್ ಸಧ್ಯ 91523 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
ಇನ್ನೂ ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರು 65 ಸಾವಿರ ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ.
10ನೇ ಸುತ್ತಿನ ಮತ ಎಣಿಕೆ ಆರಂಭ. ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಗೆ 91523 ಮತಗಳ ಮುನ್ನಡೆ. ಕ್ಷೇತ್ರದಲ್ಲಿ 816910 ಮತ ಎಣಿಕೆ ಕಾರ್ಯ ಮುಕ್ತಾಯ.
ಬಿಜೆಪಿ- 443053
ಕಾಂಗ್ರೆಸ್- 351530
ಮುನ್ನಡೆ- 91523


