
ಮಾರುತಿ ಭಜಂತ್ರಿಗೆ ಶಿಕ್ಷಣ ರತ್ನ ಪ್ರಶಸ್ತಿ ಪ್ರದಾನ

ಬೆಳಗಾವಿ: ಚನ್ನಮ್ಮ ಕಿತ್ತೂರು ತಾಲೂಕಿನ ದೇವರಶಿಗೇಹಳ್ಳಿ ಗ್ರಾಮದ ನಿವೃತ್ತ ಪ್ರೌಢ ಶಾಲೆ ಶಿಕ್ಷಕ ರಾಷ್ಟ್ರೀಯ ಬಸವ ಪ್ರಶಸ್ತಿ ಪುರಸ್ಕೃತ ಮಾರುತಿ ಗಂಗಪ್ಪ ಭಜಂತ್ರಿ ಅವರಿಗೆ ರಾಜ್ಯಮಟ್ಟದ ಶಿಕ್ಷಕ ರತ್ನ ಪ್ರಶಸ್ತಿ ಪ್ರದಾನಿಸಲಾಯಿತು.
ಭಾನುವಾರ ಬೆಳಗಾವಿ ಮಹಾನಗರ ಪಾಲಿಕೆ ಎದುರು ಇರುವ ಬಸವರಾಜ ಕಟ್ಟಿಮನಿ ಪ್ರತಿಷ್ಠಾನ ಭವನದಲ್ಲಿ ಯುವ ಕಾರ್ಯ ನಿರ್ವಹಿಸುವ ಪತ್ರಕರ್ತ ಸಂಘ ಹಾಗೂ ಸದ್ಗುರು ಸಾಹಿತ್ಯ ಪ್ರತಿಷ್ಠಾನ ಸಂಯುಕ್ತ ಆಶ್ರಯಲ್ಲಿ ಪತ್ರಿಕಾ ದಿನಾಚರಣೆ ನಿಮಿತ್ತ ನಡೆದ ಸಮಾರಂಭದಲ್ಲಿ ಲಕ್ಷ್ಮೀ ಎಜ್ಯುಕೇಶನ್ ಟ್ರಸ್ಟ್ ನಿರ್ದೇಶಕ ಸರ್ವೋತ್ತಮ ಜಾರಕಿಹೊಳಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.