Select Page

ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಅಶೋಕ್ ತೇಲಿ‌ ನೇಮಕ

ಬೆಳಗಾವಿ ವಿಭಾಗದ ಹೆಚ್ಚುವರಿ ಆಯುಕ್ತರಾಗಿ ಅಶೋಕ್ ತೇಲಿ‌ ನೇಮಕ

ಬೆಳಗಾವಿ: ಬೆಳಗಾವಿ ವಿಭಾಗದ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ಅಶೋಕ ತೇಲಿ ಅವರನ್ನು ನೇಮಕ ಮಾಡಿ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ.

ಈ ಹಿಂದೆ ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿದ್ದ ಎಸ್.ಎಸ್.ಬಿರಾದಾರ ಅವರನ್ನು ಕಂದಾಯ ಆಯುಕ್ತಾಲಯದ ಹೆಚ್ಚುವರಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.

ಈ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಜಂಟಿ ಮುಖ್ಯ ಚುನಾವಣಾಧಿಕಾರಿಯಾಗಿದ್ದ ಅಶೋಕ ತೇಲಿ ಅವರನ್ನು ನೇಮಕ ಮಾಡಲಾಗಿದೆ. ಅಶೋಕ ತೇಲಿ ಅವರು ಈ ಹಿಂದೆ ಬೆಳಗಾವಿ ಹಾಗೂ ಉಪವಿಭಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಬೆಳಗಾವಿ ಲ್ಲಿನ ಆಡಳಿತಾವಧಿಯಲ್ಲಿ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ,‌ಸರ್ಕಾರಿ ಶಾಲೆಗಳುಗೆ ಅಗತ್ಯ ಸಾಮಗ್ರಿಗಳನ್ನು ಕೊಡುವ ಮೂಲಕ ಜನ ಮನ್ನಣೆ ಪಡೆದುಕೊಂಡಿದ್ದರು.

Advertisement

Leave a reply

Your email address will not be published. Required fields are marked *

error: Content is protected !!