ಬೈಕ್ ಕಳ್ಳತನ ಆರೋಪಿ ಬಂಧಿಸಿದ ಹಿರೇಬಾಗೇವಾಡಿ ಪೊಲೀಸರು
ಬೆಳಗಾವಿ : ತಾಲೂಕಿನ ವಿವಿಧ ಭಾಗಗಳಲ್ಲಿ ಬೈಕ್ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಹಿರೇಬಾಗೇವಾಡಿ ಪೊಲೀಸರರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದ ಆಜಾದ್ ಕೀಲ್ಲೆದಾರ್ ಬಂಧಿತ ಆರೋಪಿಯಿಂದ ಸುಮಾರು ಐದು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.
ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಹಿರೇಬಾಗೆವಾಡಿ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಟಿ. ಬಿ ನೀಲಗಾರ, ಪಿ.ಎಸ್.ಐ ಎಸ್ ಆರ್ ಮುತ್ತತ್ತಿ, ಅವಿನಾಶ್ ಎ ವೈ ,
ಸಿ ಎಚ್ ಸಿ ಗಳಾದ ಅರುಣ ಕಾಂಬಳೆ , ಸಿಪಿಸಿಗಳಾದ ಎಸ್ ಬಿ ಬಾಬಣ್ಣವರ, ಪ್ರಭಾಕರ ಭೂಸಿ, ರಾಜು ಕೆಳಗಿನಮನಿ ತಾಂತ್ರಿಕ ವಿಭಾಗದ ಸಿಬ್ಬಂದಿವರಾದ ರಮೇಶ್ ಅಕ್ಕಿ, ಮಹದೇವ್ ಕಾಶಿದ್ ತಂಡಕ್ಕೆ ನಗರ ಪೋಲಿಸ್ ಆಯುಕ್ತರು ಹಾಗೂ ಡಿಸಿಪಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.