BREAKING – ಮಳೆ ಹಿನ್ನೆಲೆ ಬೆಳಗಾವಿ ಜಿಲ್ಲೆಯ ಈ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ
ಬೆಳಗಾವಿ : ಪಶ್ಚಿಮ ಘಟ್ಟ ಹಾಗೂ ಬೆಳಗಾವಿ ನಗರ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನಲೆಯಲ್ಲಿ ಖಾನಾಪುರ ಹಾಗೂ ಬೆಳಗಾವಿ ತಾಲೂಕಿನ ಶಾಲಾ ಕಾಲೇಜುಗಳಿಗೆ ಎರಡು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ವ್ಯಾಪಕ ಮಳೆಯ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನ ಎಲ್ಲ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜುಲೈ 22 ರಿಂದ 23 ರ ವರೆಗೆ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರಜೆ ಘೋಷಿಸಿದ್ದಾರೆ.
ಬೆಳಗಾವಿ ತಾಲ್ಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ.22 ರಿಂದ ಜುಲೈ.23 ರವರೆಗೆ ರಜೆ ಘೋಷಣೆ.
ಕಳೆದ ಕೆಲ ದಿನಗಳಿಂದ ಖಾನಾಪುರ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಕಾಡು ಪ್ರದೇಶದಲ್ಲಿ ಮಳೆ ಜೋರಾದ ಕಾರಣ ಮಕ್ಕಳು ಶಾಲೆಗೆ ತೆರಳುವುದಕ್ಕೂ ಪರದಾಡುವಂತಾಗಿದೆ.
ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.