
ಪಂಪಸೆಟ್ ಕಳ್ಳರ ಹೆಡೆಮುರಿ ಕಟ್ಟಿದ ಬೈಲಹೊಂಗಲ ಪೊಲೀಸ್ ; ರೈತರ ಮೆಚ್ಚುಗೆ

ಬೈಲಹೊಂಗಲ : ತಾಲೂಕಿನ ನಯಾನಗರ ಗ್ರಾಮದ ಹತ್ತಿರ ಮಲಪ್ರಭಾ ನದಿ ದಡದಲ್ಲಿರುವ ರೈತರ ಜಮೀನಿನ 10 ಪಂಪಸೆಟ್ ಕಳ್ಳತನ ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಮಾಡಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಧಾರವಾಡದ ಮಾಳಾಪೂರ ಖಾದ್ರಿಗಲ್ಲಿಯ ನಿವಾಸಿಗಳಾದ ಮೊಹಮ್ಮದನದೀಮ ಮಹಮ್ಮದಹನೀಫ ಹೆಬ್ಬಳ್ಳಿ (೩೩), ರಿಯಾಜ ರಫೀಕ ಕಾರಿಗಾರ (೨೮), ಸಮೀರ ನಜೀರ ಹೆಬ್ಬಳ್ಳಿ (೨೧), ಜಾಕೀರಹುಸೇನ ನೂರಹ್ಮದ ಮಾಲದಾರ (೨೫) ಎಂದು ಗುರುತಿಸಲಾಗಿದೆ.
ಬಂಧಿತರಿಂದ ಅಂದಾಜು 2 ಲಕ್ಷ ರೂ.ಮೌಲ್ಯದ 10 ಪಂಪಸೆಟ್‌ಗಳನ್ನು ಹಾಗೂ ಅಪಾರಧಕ್ಕೆ ಬಳಸಿದ್ದ 3ಲಕ್ಷ ರೂ.ಮೌಲ್ಯದ ಟಾಟಾ ಎಸ್ ವಾಹನವನ್ನು ಜಪ್ತಿ ಮಾಡಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತಾಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿಯ ದಡದಲ್ಲಿರುವ ರೈತರ ಜಮೀನಿನಲ್ಲಿರುವ ರೈತರ ೧೦ ಪಂಪಸೆಟ್‌ಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದರು. ಈ ಕುರಿತು ಬೈಲಹೊಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ಬೈಲಹೊಂಗಲ ಸಿಪಿಐ ಪಂಚಾಕ್ಷರಿ ಸಾಲಿಮಠ, ಪಿಎಸ್‌ಐಗಳಾದ ಗುರುರಾಜ ಕಲಬುರ್ಗಿ, ಎಫ್.ವಾಯ್.ಮಲ್ಲೂರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಎಸ್.ಯು.ಮೆಣಸಿನಕಾಯಿ, ಚೇತನ ಬುದ್ನಿ, ಎಂ.ಬಿ.ಕಂಬಾರ, ಎಮ್.ಎಸ್.ದೇಶನೂರ, ಟೆಕ್ನಿಕಲ್ ವಿಭಾಗದ ಸಿಬ್ಬಂದಿ ವಿನೋದ ಠಕ್ಕನವರ, ಸಚೀನ ಪಾಟೀಲ ಅವರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ಬೈಲಹೊಂಗಲ ಪೊಲೀಸರ ಕಾರ್ಯಕ್ಕೆ ಬೆಳಗಾವಿ ಎಸ್.ಪಿ.ಭೀಮಾಶಂಕರ ಗುಳೇದ, ರೈತರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.