ಸರ್ಕಾರಿ ಕಚೇರಿಯಲ್ಲಿ ವಿಡಿಯೋ ಚಿತ್ರೀಕರಣ ನಿಷೇಧ ಆದೇಶ ಹಿಂಪಡೆದ ರಾಜ್ಯ ಸರ್ಕಾರ
ಬೆಂಗಳೂರು : ಶುಕ್ರವಾರ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಸರ್ಕಾರಿ ಕಚೇರಿಯಲ್ಲಿ ಖಾಸಗಿ ವ್ಯಕ್ತಿಗಳು ಪೋಟೋ ಹಾಗೂ ವಿಡಿಯೋ ಚಿತ್ರೀಕರಣ ಮಾಡಬಾರದು ಎಂದು ಆದೇಶ ಹೊರಡಿಸಿತ್ತು. ಸಧ್ಯ ಈ ಆದೇಶವನ್ನು ಹಿಂಪಡೆದಿದೆ.
ರಾಜ್ಯ ಸರ್ಕಾರದ ಈ ಆದೇಶಕ್ಕೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಸರ್ಕಾರಿ ಕಚೇರಿಯಲ್ಲಿ ನಡೆಯುವ ಭ್ರಷ್ಟಾಚಾರ ಕುರಿತಾಗಿ ಧ್ವನಿ ಎತ್ತುವುದನ್ನು ತಡೆಯುವ ಹುನ್ನಾರ ಎಂದು ಹೇಳಲಾಗಿತ್ತು. ಕೂಡಲೇ ಸರ್ಕಾರ ಈ ಕಾನೂನು ವಾಪಸ್ ಪಡೆದಿದೆ.