ಮನೆ ಗೋಡೆ ಕುಸಿದು ವ್ಯಕ್ತಿ ಸಾವು
ನಿಪ್ಪಾಣಿ : ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆಯೊಂದರ ಗೋಡೆ ಕುಸಿದು ವ್ಯಕ್ತಿಯೋರ್ವ ಸಾವಣಪ್ಪಿರುವ ಘಟನೆ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಜತ್ರಾಟ್ ವೇಸ್ ಗ್ರಾಮದಲ್ಲಿ ನಡೆದಿದೆ.
ತಿರುಪತಿ ರಾಜಾರಾಮ ಹತ್ಕರ (50) ಸಾವನ್ನಪ್ಪಿದ ವ್ಯಕ್ತಿ. ಮೃತ ವ್ಯಕ್ತಿ ತಿರುಪತಿ ಮೂಲತಃ ತಾಳಿಕೋಟೆ ಗ್ರಾಮದವರು. ಕಳೆದ ವರ್ಷಗಳಿಂದ ನಿಪ್ಪಾಣಿ ತಾಲೂಕಿನ ಜತ್ರಾಟ್ ವೇಸ್ ಗ್ರಾಮದಲ್ಲಿ ವಾಸಿಸುತ್ತಿದ್ದರು. ಘಟನಾ ಸ್ಥಳಕ್ಕೆ ನಿಪ್ಪಾಣಿ ಬಸವೇಶ್ವರ ಪೋಲಿಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ವ್ಯಾಪಕ ಮಳೆ: ಬೆಳಗಾವಿ, ಖಾನಾಪುರ ತಾಲ್ಲೂಕಿನ ಶಾಲೆಗಳಿಗೆ ಎರಡು ದಿನ ರಜೆ ಘೋಷಣೆ
ಬೆಳಗಾವಿ : ಬೆಳಗಾವಿ ತಾಲ್ಲೂಕಿನಲ್ಲಿ ಅಂಗನವಾಡಿ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜು.22 ಮತ್ತು ಜು.23 ರಂದು ರಜೆ ಘೋಷಿಸಲಾಗಿದೆ.
ಅದೇ ರೀತಿ ಖಾನಾಪುರ ತಾಲ್ಲೂಕಿನಲ್ಲಿ ಅಂಗನವಾಡಿ, ಪ್ರಾಥಮಿಕ-ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳಿಗೂ ಜುಲೈ 22 ಮತ್ತು 23 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ಎಲ್ಲಾ ಸರಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಿಗೆ ರಜೆ ನೀಡಲಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.