ಮಿಲಿಟರಿ ಬರುವ ಕಾಲ ಬರುತ್ತೆ ; ಡಿಕೆಶಿಗೆ ಹೆಚ್ಡಿಕೆ ಕೊಟ್ಟ ಟಾಂಗ್
ಹಾಸನ : ರಾಜ್ಯ ಸರ್ಕಾರ ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ಕರೆದುತರುವ ಕಾಲವೂ ಬರುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ ವಿರುದ್ಧ ಕೇಂದ್ರ ಸಚಿವ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಉತ್ತರ ಕನ್ನಡದ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿ, ಇವರೇನು ಮಿಲಿಟರಿ ಕರೆದುಕೊಂಡು ಬಂದಿದ್ದರಾ ಎಂದು ಪ್ರಶ್ನಿಸಿದ್ದರು.
ಹಾಸನ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದರೋಡೆ ಮಾಡುವುದನ್ನು ನಿಲ್ಲಿಸಲು ಮಿಲಿಟರಿ ಕರೆದುಕೊಂಡು ಬನ್ನಿ ಎಂದಿದ್ದಾರೆ. ಮಿಲಿಟರಿ ಬರುವ ಕಾಲ ಬರುತ್ತೆ, ಆಗ ಕರೆದುಕೊಂಡು ಬರೋಣ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರು ನಿನ್ನೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿಗೆ ಭೇಟಿ ನೀಡಿದ್ದರು. ಈ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ ಅವರು ಯಾಕೆ ಇಲ್ಲಿಗೆ ಬರುತ್ತಾರೆ. ಏನು ಮಿಲಿಟರಿ ಕರಕೊಂಡು ಬಂದಿದ್ದಾರೆ? ಎಂದು ಕಿಡಿಕಾರಿದ್ದರು.
ಪಾಪ.. ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ, ಮಿಲಿಟರಿ ತರಬೇಕು ಎಂದು. ಅವರು ಮಿಲಿಟರಿಯನ್ನು ಏಕೆ ತರಲು ಹೇಳಿದ್ದಾರೆ ಎಂದರೆ ಈ ರಾಜ್ಯದಲ್ಲಿ ಅವ್ಯಾಹತವಾಗಿ ಲೂಟಿ, ದರೋಡೆ ನಡೆಯುತ್ತಿದೆ.
ಭಯೋತ್ಪಾದಕ ಕೃತ್ಯಗಳಿಗಿಂತ ದರೋಡೆ, ಲೂಟಿ ಚೆನ್ನಾಗಿ ನಡೆಯುತ್ತಿದೆ. ದರೋಡೆ ಹೊಡೆಯುವುದನ್ನು ನಿಲ್ಲಿಸಿಲು ಮಿಲಿಟರಿಯನ್ನು ಕರೆ ತರಲು ಹೇಳಿರಬೇಕು ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.