
ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ

ಧಾರವಾಡ : ನಿರಂತರ ಮಳೆ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಎಲ್ಲಾ ಶಾಲೆ- ಕಾಲೇಜುಗಳಿಗೆ ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಸತತವಾಗಿ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ ಜಿಲ್ಲಾಧಿಕಾರಿ ಶಾಲೆ ಹಾಗೂ ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ.
