
ಶಂಕಿತ ಡೆಂಗ್ಯೂ ಜ್ವರಕ್ಕೆ ಬಾಲಕಿ ಬಲಿ

ಬೆಳಗಾವಿ : ಬೆಳಗಾವಿಯಲ್ಲಿ ರಣ ಭೀಕರ ಮಳೆಯ ನಡುವೆ ಸಾಂಕ್ರಾಮಿಕ ರೋಗಗಳು ಹೆಚ್ಚಾಗಿದ್ದು ಶಂಕಿತ ಡೆಂಗ್ಯೂಗೆ 14 ವರ್ಷದ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶನಿವಾರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಹೊನಗಾ ಗ್ರಾಮದಲ್ಲಿನ ಬಾಲಕಿಗ ಪ್ರನಾಳಿ ಪರಶುರಾಮ ಉಂದ್ರೆಗೆ ಗುರುವಾರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ. ಬಾಲಕಿ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.