
ಸಂಚಾರಕ್ಕೆ ಮುಕ್ತವಾದ ಚಿಕ್ಕೊಳಿ ಸೇತುವೆ

ಗೋಕಾಕ್ : ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಆರ್ಭ ಕಡಿಮೆಯಾದ ಹಿನ್ನೆಲೆಯಲ್ಲಿ ಮಾರ್ಕಂಡೇಯ ನದಿಯ ಒಳಹರಿವಿನಲ್ಲಿ ಇಳಿಕೆಯಾಗಿದೆ. ಕಳೆದ ಎರಡು ದಿನಗಳಿಂದ ಬಂದ್ ಆಗಿದ್ದ ಚಿಕ್ಕೊಳಿ ಸೇತುವೆ ಇಂದು ಸಂಚಾರಕ್ಕೆ ಮುಕ್ತವಾಗಿದೆ.
ಸೇತುವೆ ಸಂಚಾರಕ್ಕೆ ಮುಕ್ತವಾದ ಹಿನ್ನೆಲೆ ಗೋಕಾಕ ತಹಶೀಲ್ದಾರ್ ಸೇರಿದಂರೆ ಲೋಕೊಪಯೋಗಿ ಇಲಾಕೆಯ ಅಧಿಕಾರಿಗಳು ಪರಿಶೀಲನೆ ನಡೆಸಿದರು.
ಸೇತುವೆಯ ಪರಿಸ್ಥಿತಿಯನ್ನು ಗಮನಿಸಿಕೊಂಡು ಸಧ್ಯ ಲ ದ್ವಿಚಕ್ರ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಿದ್ದು ನೀರು ಸಂಪೂರ್ಣವಾಗಿ ಇಳಿಕೆ ಕಂಡ ಮೇಲೆ ಭಾರಿ ವಾಹನಗಳ ಸಂಚಾರಕ್ಕೆ ಅನುವುಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.