
ಘಟಪ್ರಭಾ ನದಿ ನೀರಿನ ಮಟ್ಟ ಹೆಚ್ಚಳ ; ಲೋಳಸೂರ ಸೇತುವೆ ಜಲಾವೃತ

ಗೋಕಾಕ್ : ಬೆಳಗಾವಿ ಸೇರಿದಂತೆ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ಘಟಪ್ರಭಾ ನದಿ ನೀರಿನ ಮಟ್ಟ ಹೆಚ್ಚಾಗಿದ್ದು, ಗೋಕಾಕ್ ನಗರಕ್ಕೆ ಸಂಪರ್ಕ ಕಲ್ಪಿಸುವ ಲೋಳಸೂರ ಸೇತುವೆ ಜಲಾವೃತಗೊಂಡಿದೆ.
ಹೌದು ಕಳೆದ ಎರಡು ದಿನಗಳಿಂದ ಮಳೆ ತಗ್ಗಿದ್ದ ಹಿನ್ನೆಲೆಯಲ್ಲಿ ಘಟಪ್ರಭಾ ನದಿ ಆರ್ಭಟ ಕಡಿಮೆಯಾಗಿತ್ತು. ಆದರೆ ಮತ್ತೆ ಮಳೆ ಹೆಚ್ಚಾಗಿದ್ದು ಗೋಕಾಕ್ ನಗರದಲ್ಲಿ ಪ್ರವಾಹ ನೀರು ಸುತ್ತುವರಿಯುತ್ತಿದೆ.
ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಮಳೆ ಆರ್ಭಟ ಮುಂದುವರಿದಿದ್ದು ಕೃಷ್ಣಾ ನದಿ ಪ್ರವಾಹ ಹೆಚ್ಚಳವಾಗಿದೆ. ಈಗಾಗಲೇ ಜಿಲ್ಲೆಯ 35 ಕ್ಕೂ ಅಧಿಕ ಸೇತುವೆಗಳು ಜಲಾವೃತಗೊಂಡಿವೆ.
ಕೃಷ್ಣಾ ನದಿ ಪಾತ್ರದ ಸುಮಾರು 60 ಕ್ಕೂ ಅಧಿಕ ಗ್ರಾಮಗಳಿಗೆ ನೀವು ಆವರಿಸಿದೆ. ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮ ಜಲಾವೃತಗೊಂಡಿದ್ದು ಸುಮಾರು 30 ಕ್ಕೂ ಅಧಿಕ ಮನೆಗಳು ನದಿ ನೀರಿನಲ್ಲಿ ಮುಳುಗಡೆಯಾಗಿವೆ.