ನದಿಯಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಪತ್ತೆ
ಬೆಳಗಾವಿ : ನಿಯಂತ್ರಣ ತಪ್ಪಿ ಮಾರ್ಕಂಡೇಯ ನದಿಯಲ್ಲಿ ಉರುಳಿ ಬಿದ್ದು ನೀರು ಪಾಲಾಗಿದ್ದ ಯುವಕನ ಮೃತದೇಹ ಪತ್ತೆಹಚ್ಚುವಲ್ಲಿ ಎನ್ ಡಿ ಆರ್ ಏಫ್ ತಂಡ ಯಶಸ್ವಿಯಾಗಿದೆ.
ಬೆಳಗಾವಿ ತಾಲೂಕಿನ ಅಲತ್ತಗಾ ಗ್ರಾಮದ ಓಂಕಾರ ಪಾಟೀಲ(23) ಮೃತಪಟ್ಟ ಯುವಕ. ಬೆಳಗಾವಿ ನಗರದ ಹೊರವಲಯದಲ್ಲಿರುವ ಕಂಗ್ರಾಳಿ ಬಳಿಯ ಮಾರ್ಕಂಡೇಯ ನದಿಗೆ ಬಿದ್ದಿದ್ದ ಬೈಕ್ ಸವಾರ.
ನಿಯಂತ್ರಣ ತಪ್ಪಿ ಬೈಕ್ ಸಮೇತ ನೀರುಪಾಲಾಗಿದ್ದ ಇಬ್ಬರಲ್ಲಿ ಓರ್ವನನ್ನು ರಕ್ಷಣೆ ಮಾಡಲಾಗಿತ್ತು. ಆದರೆ ನಿನ್ನೆ ರಾತ್ರಿಯಿಂದ
ಮಾರ್ಕಂಡೇಯ ನದಿಯಲ್ಲಿ ಶೋಧ ಕಾರ್ಯಾಚರಣೆ ಮಾಡ್ತಿದ್ದ ಎಸ್ ಡಿಆರ್ ಎಫ್ ತಂಡದ ಸಿಬ್ಬಂದಿಗಳಿಗೆ ಇಂದು ಯುವಕನ ಮೃತದೇಹ ಪತ್ತೆಯಾಗಿದೆ.
ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.