ಅವೆಲ್ಲ ಲೈಟ್ ಹುಳ ರೀ, 15 ನಿಮಿಷ ; ಹಿಂಗ್ಯಾಕಂದ್ರು ಲಖನ್ ಜಾರಕಿಹೊಳಿ
ಬೆಳಗಾವಿ : ಏ ಅವೆಲ್ಲ ಲೈಟ್ ಹುಳ ರೀ. 15 ನಿಮಿಷ, ಹಿಂಗ ಬರ್ತಾವ ಮತ್ತ ಆರಿ ಹೋಗ್ತಾವ ಎಂದು ಹೇಳುವ ಮೂಲಕ ಸಿದ್ದರಾಮಯ್ಯ ವಿರೋಧಿ ಬಣಕ್ಕೆ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅಭಿಪ್ರಾಯಪಟ್ಟರು.
ಗೋಕಾಕ್ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು. ಸಿದ್ದರಾಮಯ್ಯ ನಾಯಕತ್ವದಲ್ಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಮುಂದಿನ ಹತ್ತು ವರ್ಷ ಸಿದ್ದರಾಮಯ್ಯ ಸಿಎಂ, ಅವರ ಬದಲಾವಣೆ ಇಲ್ಲ ಎಂದು ಲಖನ್ ಹೇಳಿದರು.
ಸತೀಶ್ ಜಾರಕಿಹೊಳಿ ಸಧ್ಯ ಸಿಎಂ ಆಗುತ್ತೇನೆ ಎಂದು ಹೇಳಿಲ್ಲ. ಇನ್ನೂ 10 ವರ್ಷ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಇರಲಿದೆ. ಸತೀಶ್ ಜಾರಕಿಹೊಳಿ ಅವರಿಗೆ ಡಿಸಿಎಂ ಹುದ್ದೆ ಸಿಕ್ಕರೆ ಸಿಗಬಹುದು ಎಂದು ಸಹೋದರ ಲಖನ್ ಜಾರಕಿಹೊಳಿ ಅಭಿಪ್ರಾಯಪಟ್ಟರು.
ರಾಜ್ಯದಲ್ಲಿ 136 ಸದಸ್ಯ ಬಲದ ಕಾಂಗ್ರೆಸ್ ಸರ್ಕಾರ ಸುಭದ್ರ ಆಡಳಿತ ನೀಡುತ್ತಿದೆ. ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಆಗಿದ್ದು ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುತ್ತಿದ್ದಾರೆ ಎಂದು ಲಖನ್ ಜಾರಕಿಹೊಳಿ ಹೇಳಿದರು.