ವದಂತಿ ಹಬ್ಬಿಸುವವರಿಗೆ ಸ್ಪಷ್ಟನೆ ಕೊಟ್ಟ ಸಾಹುಕಾರ್ ; ಏನು ಹೇಳಿದ್ರು ಬಾಲಚಂದ್ರ ಜಾರಕಿಹೊಳಿ
ಮೂಡಲಗಿ: ಕಳೆದ ಹಲವಾರು ವರ್ಷಗಳಿಂದ ಭಗೀರಥ ಉಪ್ಪಾರ ಸಮಾಜವು ಮೀಸಲಾತಿಗಾಗಿ ಹೋರಾಟ ನಡೆಯುತ್ತಿದ್ದು ನಮ್ಮ ಬೆಂಬಲ ಇದ್ದೇ ಇದೆ. ಯಾರು ಏಷ್ಟೇ ವದಂತಿಗಳನ್ನು ಹಬ್ಬಿಸುತ್ತಿದ್ದರೂ ಸಮಾಜಕ್ಕೆ ಸಿಗಬೇಕಿರುವ ಮೀಸಲಾತಿ ಹೋರಾಟದಲ್ಲಿ ಪ್ರಾಮಾಣ ಕವಾಗಿ ನಮ್ಮ ಕುಟುಂಬವು ಸ್ಪಂದಿಸಲಿದೆ ಎಂದು ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಸೋಮವಾರ ಪಟ್ಟಣದ ಹೊರವಲಯದಲ್ಲಿರುವ ಮೂಡಲಗಿ ಕ್ರಾಸ್‌ನಲ್ಲಿ ನೂತನವಾಗಿ ನಿರ್ಮಿಸಿದ ಮಹರ್ಷಿ ಭಗೀರಥ ಮೂರ್ತಿಯನ್ನು ಅನಾವರಣ ಹಾಗೂ ಮಹರ್ಷಿ ಉಪ್ಪಾರ ಸಮಾಜದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಭಗೀರಥ ಉಪ್ಪಾರ ಸಮಾಜದ ಬೇಡಿಕೆಗಳಿಗೆ ನಾವು ಸದಾ ಬದ್ಧರಿದ್ದು, ಈ ನಿಟ್ಟಿನಲ್ಲಿ ಕೆಲಸ ಮಾಡುವುದಾಗಿ ಅವರು ತಿಳಿಸಿದರು.
ಅನೇಕ ವರ್ಷಗಳಿಂದ ಈ ಸಮಾಜವು ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಮೀಸಲಾತಿಯ ಹೋರಾಟ ಮಾಡುತ್ತಿದೆ. ಈ ಹೋರಾಟದಲ್ಲಿಯೂ ನಾವು ಸಕ್ರಿಯರಾಗಿ ತೊಡಗಿಕೊಂಡು ಭಗೀರಥ ಸಮಾಜಕ್ಕೆ ಎಲ್ಲ ರೀತಿಯ ಸಹಕಾರ ನೀಡಿದ್ದೇವೆ. ಮುಂದಿನ ದಿನಗಳಲ್ಲಿಯೂ ಸಹ ಈ ಸಮಾಜಕ್ಕೆ ಸಿಗಬೇಕಿರುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ.
ಯಾರು ಏಷ್ಟೇ ವದಂತಿಗಳನ್ನು ಹಬ್ಬಿಸುತ್ತಿದ್ದರೂ ಸಮಾಜಕ್ಕೆ ಸಿಗಬೇಕಿರುವ ಮೀಸಲಾತಿ ಹೋರಾಟದಲ್ಲಿ ಪ್ರಾಮಾಣ ಕವಾಗಿ ನಮ್ಮ ಕುಟುಂಬವು ಸ್ಪಂದಿಸಲಿದ್ದು, ರಾಜ್ಯ ಸರ್ಕಾರದ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಭಗೀರಥ ಉಪ್ಪಾರ ಸಮಾಜಕ್ಕೆ ಮೀಸಲಾತಿ ಕಲ್ಪಿಸಲು ಅತ್ಯಂತ ಉತ್ಸಾಹ ಹಾಗೂ ಪ್ರಾಮಾಣ ಕತೆಯಿಂದ ಕರ್ತವ್ಯ ನಿರ್ವಹಿಸುತ್ತೇನೆಂದು ಅವರು ಸಮಾಜ ಬಾಂಧವರಿಗೆ ವಾಗ್ದಾನ ನೀಡಿದರು.
ಉಪ್ಪಾರ ಸಮಾಜವು ಶಿಕ್ಷಣ, ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯವಾಗಿ ಮುಂದೆ ಬರಬೇಕಿದೆ. ಈ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಗಬೇಕಿದೆ. ನಂಬಿಕೆಗೆ ಹೆಸರಾಗಿರುವ ಉಪ್ಪಾರ ಸಮಾಜದ ಶ್ರೇಯೋಭಿವೃದ್ದಿಗೆ ಕಟಿಬದ್ಧನಾಗಿರುವೆ. ಎಲ್ಲ ಸಮಾಜಗಳಂತೆ ಈ ಸಮಾಜದವರ ಭಗೀರಥ ಜಯಂತಿಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದರು.
ಹೊಸದುರ್ಗ ಭಗೀರಥ ಪೀಠದ ಜಗದ್ಗುರು ಪುರುಷೋತ್ತಮಾನಂದಪುರಿ ಮಹಾಸ್ವಾಮಿಜಿ ಮಾತನಾಡಿ. ನಮ್ಮ ಸಮಾಜವು ಶ್ರಮಿಕ ಸಮಾಜವಾಗಿದೆ. ರುಚಿ-ರುಚಿಯಾದ ಭಕ್ಷö್ಯಭೋಜನಗಳನ್ನು ಕೊಟ್ಟು, ಭೂಮಿಗೆ ಜೀವಜಲ ಹರಿಸಿರುವ ಸಮಾಜವಾಗಿದೆ. ಮೀಸಲಾತಿಗಾಗಿ ಕುಲಶಾಸ್ತ್ರದ ಅಧ್ಯಯನ ವರದಿ ಸರ್ಕಾರಕ್ಕೆ ಸಲ್ಲಿಸಿದ್ದು, ಕೇಂದ್ರ ಸರ್ಕಾರಕ್ಕೆ ವರದಿ ಶಿಫಾರಸ್ಸುಗೊಳ್ಳಬೇಕಿದೆ. ಈ ದಿಸೆಯಲ್ಲಿ ಜಾರಕಿಹೊಳಿ ಕುಟುಂಬವು ನಮ್ಮ ಸಮಾಜಕ್ಕೆ ಬೆನ್ನೆಲಬಾಗಿ ನಿಂತಿದೆ. ಅದರಲ್ಲೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ನಮಗೆ ದೊಡ್ಡ ಆಸರೆಯಾಗಿ ನಿಂತಿದ್ದಾರೆ. ನಮಗಷ್ಷೇ ಅಲ್ಲ. ಎಲ್ಲ ಸಮಾಜಗಳಿಗೂ ಬಾಲಚಂದ್ರ ಜಾರಕಿಹೊಳಿ ಅವರು ಶಕ್ತಿಯಾಗಿದ್ದಾರೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.
ಚಾಮರಾಜನಗರ ಶಾಸಕ ಹಾಗೂ ಭಗೀರಥ ಉಪ್ಪಾರ ಸಮಾಜದ ನಾಯಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಸಿದ್ದರಾಮಯ್ಯನವರು ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸರ್ಕಾರದಿಂದ ಭಗೀರಥ ಜಯಂತಿ ಆಚರಿಸುವ ಸುತ್ತೋಲೆ ಹೊರಡಿಸಿದ್ದರು. ಸರ್ಕಾರ ವಿವಿಧ ಸಮಾಜಗಳ ಅಭಿವೃದ್ದಿಗಾಗಿ ನಿಗಮ ಮಂಡಳಿಗಳನ್ನು ರಚಿಸಿದ್ದು, ಈಗ ನೀಡುತ್ತಿರುವ ಅನುದಾನ ಯಾವುದಕ್ಕೂ ಸಾಲುತ್ತಿಲ್ಲ. ಪ್ರತಿ ಸಮಾಜಗಳ ನಿಗಮಗಳಿಗೆ ೫೦ ಕೋಟಿ ರೂಗಳ ಅನುದಾನವನ್ನು ಪ್ರತಿ ವರ್ಷವು ನೀಡಬೇಕು. ಇದರಿಂದ ಸಮಾಜಗಳು ಆರ್ಥಿಕವಾಗಿ ಸುಧಾರಣೆಯಾಗಲು ಸಹಕಾರಿಯಾಗುತ್ತವೆ ಎಂದು ಹೇಳಿದರು.
ಸಾನಿಧ್ಯವನ್ನು ಶಿವಬೋಧರಂಗ ಮಠದ ದತ್ತಾತ್ರೇಯ ಬೋಧ ಮಹಾಸ್ವಾಮಿಗಳು ವಹಿಸಿ ಆಶಿರ್ವಚನ ನೀಡಿದರು.
ಸುಣಧೋಳಿಯ ಶಿವಾನಂದ ಮಹಾಸ್ವಾಮಿಗಳು, ಭಾಗೋಜಿಕೊಪ್ಪದ ಡಾ. ಶಿವಲಿಂಗ ಮುರುಘರಾಜೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಕಟಕಭಾವಿಯ ಧರೇಶ್ವರ ಮಹಾಸ್ವಾಮಿಗಳು, ಉಪ್ಪಾರಹಟ್ಟಿಯ ನಾಗೇಶ್ವರ ಮಹಾಸ್ವಾಮಿಗಳು, ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಯುವ ಮುಖಂಡರಾದ ರಾಹುಲ ಜಾರಕಿಹೊಳಿ, ಸರ್ವೋತ್ತಮ ಜಾರಕಿಹೊಳಿ, ಮಾಜಿ ಸಚಿವ ಆರ್.ಎಮ್.ಪಾಟೀಲ, ಹಿರಿಯ ಸಹಕಾರಿ ಬಿ.ಆರ್.ಪಾಟೀಲ, ಸೇರಿದಂತೆ ಭಗೀರಥ ಉಪ್ಪಾರ ಸಮಾಜದ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಹಲವಾರು ಮುಖಂಡರು, ವಿವಿಧ ಸಮಾಜದ ಮುಖಂಡರಗಳು ಉಪಸ್ಥಿತರಿದ್ದರು.