ಬೆಳಗಾವಿ : ಡಿಸಿ ಕಚೇರಿ ಎದುರು ಮೃತದೇಹ ಇಟ್ಟು ಪ್ರತಿಭಟನೆ
ಬೆಳಗಾವಿ : ಸ್ಮಶಾನಕ್ಕೆ ತೆರಳಲು ದಾರಿ ಇಲ್ಲದಿದ್ದಕ್ಕೆ ಆಕ್ರೋಶಗೊಂಡು ಏಣಗಿ ಗ್ರಾಮಸ್ಥರಿಂದ ಅಬ್ದುಲ್ ಖಾದರ್ ಮಿಶ್ರಿಕೋಟಿ(65) ಮೃತದೇಹ ಇಟ್ಟು ಪ್ರತಿಭಟನೆ ಮಾಡಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. .
ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಏಣಗಿ ಗ್ರಾಮದಲ್ಲಿ ಹಿಂದೂ ಮುಸ್ಲಿಂ ಎರಡೂ ಸಮುದಾಯದವರಿಗೆ ಸ್ಮಶಾನಕ್ಕೆ ತೆರಳಲು ರಸ್ತೆ ಇಲ್ಲ ವೆಂದು ಆರೋಪಿಸಿ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ವ್ಯಕ್ತಿ ಮೃತದೇಹ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.