ಬೈಲಹೊಂಗಲ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆ ಅರ್ಜಿ ದಿನಾಂಕ ವಿಸ್ತರಣೆ
ಬೆಳಗಾವಿ : ಬೈಲಹೊಂಗಲ ತಾಲೂಕಿನಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ – 05 ಹಾಗೂ ಅಂಗನವಾಡಿ ಸಹಾಯಕಿಯರ – 20 ಹುದ್ದೆಗಳಿಗೆ ಆನ್‌ಲೈನ್ ಮೂಲಕ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿತ್ತು.
ಅರ್ಜಿ ಸಲ್ಲಿಸಲು ಆಗಷ್ಟ್.04 ರವರೆಗೆ ಕೊನೆಯ ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ತಾಂತ್ರಿಕ ಸಮಸ್ಯೆಯಿಂದಾಗಿ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿದ್ದು, ಸದರಿ ಸಮಸ್ಯೆಗಳನ್ನು ಸರಿಪಡಿಸಿ ಆಗಷ್ಟ್. 25 ರವರೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸಲಾಗಿದೆ.
ಈ ಕುರಿತು ಬೈಲಹೊಂಗಲನ ತಾಲೂಕಾ ಅಂಗನವಾಡಿ
ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಯ ಅರ್ಜಿ ಪರಿಶೀಲನಾ ಸಮಿತಿ ಹಾಗೂ ಶಿಶು ಅಭಿವೃದ್ಧಿ
ಯೋಜನಾಧಿಕಾರಿಗಳ ಸದ್ಯಸ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


