ಬೆಳಗಾವಿಯಲ್ಲಿ ಯುವಕನಿಗೆ ಚೂರಿ ಇರಿತ : ಸ್ಥಳಕ್ಕೆ ಬಂದ ಪೊಲೀಸ್ ಅಧಿಕಾರಿಗಳು
ಬೆಳಗಾವಿ : ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಬಾಲಕನಿಗೆ ಚೂರಿ ಇರಿತದಿಂದ ವ್ಯಕ್ತಿಯೊರ್ವನಿಗೆ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ.
ಅಪರಿಚಿತರಿಂದ ಬೈಕ್ ಮೇಲೆ ಬಂದು ಚೂರಿ ಇರಿದ ಪರಿಣಾಮವಾಗಿ ನಗರದ ಕ್ಯಾಂಪ್ ಪ್ರದೇಶದ ನಿವಾಸಿ ಫರಾನ್ ಧಾರವಾಡಕರ್(15) ಬೆನ್ನಿಗೆ ಚೂರಿ ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ತತಕ್ಷಣ ಫರಾನ್ ನನ್ನು ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಷಯ ತಿಳಿದ ಕೂಡಲೇ ಬಿಮ್ಸ್ ಆವರಣದಲ್ಲಿ ಜಮಾವಣೆಗೊಳ್ಳುತ್ತಿರುವ ಜನರನ್ನು ಎಪಿಎಂಸಿ ಪೊಲೀಸರು ಚದುರಿಸುತ್ತಿದ್ದಾರೆ.
ಲಾಠಿ ಹಿಡಿದು ಕುಟುಂಬಸ್ಥರು ಹಾಗೂ ಸಂಬಂಧಿಕರನ್ನ ಹೊರಗೆ ಕಳುಹಿಸಿದರು.
ಸ್ಥಳದಲ್ಲಿ ಬಿಗುವಿಣ ವಾತಾವರಣ ನಿರ್ಮಾಣಗೊಂಡಿದ್ದು, ಡಿಸಿಪಿ ಸ್ನೇಹಾ ಸ್ಥಳಕ್ಕೆ ಡಿಸಿಪಿ ಸ್ನೇಹಾ ಭೇಟಿ ನೀಡುತ್ತಿದ್ದಂತೆ ಜಮಾಗೊಂಡವರು ಪಲಾಯನವಾದರು. ಎಪಿಎಂಸಿ ಪೊಲೀಸರು ಸ್ಥಳದಲ್ಲಿಯೇ ಮೊಕ್ಕಾ ಹೂಡಿದ್ದಾರೆ.