ಸಿಡಿ ಶಿವು ಅಧಿಕಾರಕ್ಕೆ ಬಂದ್ರೆ ಕಾಂಗ್ರೆಸ್ ಡಮಾರ್ ; ಡಿಕೆಶಿ ವಿರುದ್ಧ ಸಾಹುಕಾರ್ ಗುಡುಗು
ಬೆಳಗಾವಿ : ಸಿದ್ದರಾಮಯ್ಯ ಒಬ್ಬ ಮಾಸ್ ಲೀಡರ್. ಅವರಿಲ್ಲದೆ ಕಾಂಗ್ರೆಸ್ ಗೆ ಉಳಿಗಾಲವಿಲ್ಲ. ಸಿಎಂ ರಾಜೀನಾಮೆ ನೀಡಿ ಡಿ.ಕೆ ಶಿವಕುಮಾರ್ ಅಧಿಕಾರಕ್ಕೆ ಬಂದ ಎರಡು ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಮಾಜಿ ಸಿಎಂ ರಮೇಶ್ ಜಾರಕಿಹೊಳಿ ಸಿಎಂ ಪರ ಬ್ಯಾಟ್ ಬೀಸಿದ್ದಾರೆ.
ಶನಿವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಇವರು. ಸಿಎಂ ಸಿದ್ದರಾಮಯ್ಯ ಅವರು ಹೋರಾಟದಿಂದ ಅಧಿಕಾರಕ್ಕೆ ಬಂದವರು. ಅವರಿಲ್ಲದೆ ಕಾಂಗ್ರೆಸ್ ಗೆ ಉಳಿಗಾಲವಿಲ್ಲ.
ಸಿಡಿ ಶಿವು ಅಧಿಕಾರಕ್ಕೆ ಬಂದರೆ ರಾಜ್ಯ ಅಧೋಗತಿಗೆ ಸಾಗುತ್ತದೆ. ಇವರು ಸಿಎಂ ಆದ ಎರಡು ದಿನಗಳಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಡಿಕೆಶಿ ವಿರುದ್ಧ ಹರಿಹಾಯ್ದರು.
ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಆದೇಶ ಹೊರಡಿಸಿರುವ ಕುರಿತು ನಾನು ಯಾವುದೇ ಪ್ರತಿಕ್ರಿಯೆ ನೀಡಲಾರೆ. ನಮ್ಮ ಪಕ್ಷ ತಗೆದುಕೊಂಡಿರುವ ನಿರ್ಧಾರಕ್ಕೆ ಬದ್ಧವಾಗಿರುವೆ.
ಈ ಹಿಂದೆ ಯಡಿಯೂರಪ್ಪನವರ ವಿರುದ್ಧ ಆರೋಪ ಕೇಳಿಬಂದಾಗ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರಾಗಿ ಏನೆಲ್ಲ ಆರೋಪ ಮಾಡಿದ್ದರೂ ಎಂಬುದನ್ನು ನೆನಪಿಸಿಕೊಂಡು ತಮ್ಮ ನಿರ್ಧಾರ ಕೈಗೊಳ್ಳಲಿ ಎಂದು ಹೇಳಿದರು.


